ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ 
ರಾಜ್ಯ

ಕಾಲರಾ ಅಥವಾ ಯಾವುದೇ ಸಾಂಕ್ರಾಮಿಕ ಕಾಣಿಸಿಕೊಂಡರೆ ಅಧಿಕಾರಿಗಳೇ ಜವಾಬ್ದಾರರು: CM ಸಿದ್ದರಾಮಯ್ಯ

ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರ್‌ಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ.

ಬೆಂಗಳೂರು: ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರ್‌ಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬರ ನಿರ್ವಹಣೆ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ? ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು. ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಜಿಲ್ಲಾಧಿಕಾರಿಗಳೇ ನೇರ ಹೊಣೆ. ಕಾಲರಾ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಸೂಕ್ತ ಕ್ರಮ ಜರುಗಿಸಲಾಗುವುದು.

ಮೈಸೂರಿನ ಎರಡು ಹಳ್ಳಿಗಳಲ್ಲಿ ಕಾಲರಾ ತಲೆದೋರಿದೆ. ಟಿ.ನರಸೀಪುರ ತಾಲ್ಲೂಕು ತಗಡೂರು ಹಾಗೂ ಕೆ.ಸಾಲುಹುಂಡಿ ಗ್ರಾಮಗಳಲ್ಲಿ ಕಾಲರಾ ಕಂಡುಬಂದಿದೆ. ಕಲುಷಿತ ನೀರು ಕುಡಿದು ಕಾಲರಾ ಉಂಟಾಗಿದೆ. ಸಂಬಂಧಪಟ್ಟ ಎಂಜಿನಿಯರುಗಳು ಕುಡಿಯಲು ಯೋಗ್ಯ ನೀರು ಒದಗಿಸುವಲ್ಲಿ ವಿಫಲವಾಗಿದ್ದಾರೆ. ಕುಡಿಯುವ ನೀರಿನ ಮೂಲ ಕುಡಿಯಲು ಯೋಗ್ಯವಾಗಿದೆಯೇ ಇಲ್ಲವೇ ಎಂದು ಪರಿಶೀಲಿಸದೆ ಇರುವುದು ದೊಡ್ಡ ಅಪರಾಧ. ಕೆ. ಸಾಲುಹುಂಡಿಯಲ್ಲಿ 40ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ, ಒಬ್ಬ ಯುವಕ ಮೃತಪಟ್ಟಿದ್ದಾನೆ.

ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ.ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ ಎಂದು ಹೇಳಿದರು. ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6ರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು. ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ.

ಫೆಬ್ರವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಜೂನ್‌ ಕೊನೆಯ ವರೆಗೆ ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ. ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್‌ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ. 500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.

ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಬೇಕು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ವಿಮಾ ಕಂಪನಿಗಳ ನಡವಳಿಕೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ. ಆದ್ದರಿಂದ ಈ ಕುರಿತು ಮುಂಚಿತವಾಗಿಯೇ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT