ಅಪಘಾತಕ್ಕೀಡಾದ ಓಮಿನಿ ಕಾರು 
ರಾಜ್ಯ

ಚಿಕ್ಕಮಗಳೂರು: ಲಾರಿ-ಓಮಿನಿ ಕಾರು ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಶುಕ್ರವಾರ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಶುಕ್ರವಾರ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಬಣಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರು ಚಿತ್ರದುರ್ಗ ಮೂಲದವರು ಎನ್ನಲಾಗಿದೆ.

ಕುಟುಂಬವೊಂದು ಎರಡು ಕಾರುಗಳಲ್ಲಿ ಧರ್ಮಸ್ಥಳಕ್ಕೆ ತೆರಳಿತ್ತು. ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಾಪಾಸ್ ಬರುತ್ತಿದ್ದಾಗ ಓಮಿನಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಮೂಡಿಗೆರೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT