ಅಪಘಾತಕ್ಕೀಡಾದ ಕಾರು. 
ರಾಜ್ಯ

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ: ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬಿದ್ದ ಕಾರು, ನಾಲ್ವರ ದುರ್ಮರಣ!

ಹಾವೇರಿಯಿಂದ ತಿರುಪತಿಗೆ ತೆರಳುತ್ತಿದ್ದ ಎರ್ಟಿಗಾ ಕಾರು​ ಪಲ್ಟಿಯಾಗಿ ಸರ್ವಿಸ್​​ ರೋಡ್‌ಗೆ​ ಬಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹಲಗೇರಿ ಸೇತುವೆ ಬಳಿ ಶುಕ್ರವಾರ ನಡೆದಿದೆ.

ಹಾವೇರಿ: ಹಾವೇರಿಯಿಂದ ತಿರುಪತಿಗೆ ತೆರಳುತ್ತಿದ್ದ ಎರ್ಟಿಗಾ ಕಾರು​ ಪಲ್ಟಿಯಾಗಿ ಸರ್ವಿಸ್​​ ರೋಡ್‌ಗೆ​ ಬಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹಲಗೇರಿ ಸೇತುವೆ ಬಳಿ ಶುಕ್ರವಾರ ನಡೆದಿದೆ.

ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದ ವೇಳೆ ರಾತ್ರಿ 12:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿ 4 ಪಿಬಿ ರಸ್ತೆಯಿಂದ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತರನ್ನು ಹಾವೇರಿಯ ಅಶ್ವಿನಿ ನಗರದ ಸುರೇಶ್(45), ಐಶ್ವರ್ಯ(22), ಚೇತನಾ(7), ಪ್ರಮಿಳಾ(28) ಎಂದು ಗುರುತಿಸಲಾಗಿದೆ. ಸುರೇಶ್​, ಐಶ್ವರ್ಯ, ಚೇತನಾ ಸ್ಥಳದಲ್ಲೇ ಮೃತಪಟ್ಟರೆ, ಪ್ರಮೀಳಾ ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಸ ಬಾರ್ಕಿ, ಪ್ರಭುರಾಜ್ ಸಮಗಂಡಿ, ಗೀತಾ ಭಾರ್ಕಿ, ಹೊನ್ನಪ್ಪ ಬಾರ್ಕಿ ಎಂಬವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಹಾವೇರಿ ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಣೆಬೆನ್ನೂರು ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT