ಬಿವೈ ವಿಜಯೇಂದ್ರ IANS
ರಾಜ್ಯ

ಬೆಂಗಳೂರು ನಿರ್ಲಕ್ಷ್ಯ ವಿರೋಧಿಸಿ ಮೇ 28ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿನ ಅವ್ಯವಸ್ಥೆ ಖಂಡಿಸಿ ಮೇ 28ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿನ ಅವ್ಯವಸ್ಥೆ ಖಂಡಿಸಿ ಮೇ 28ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಬೆಂಗಳೂರು ಎದುರಿಸುತ್ತಿರುವ ಬಿಕ್ಕಟ್ಟನ್ನು ಎತ್ತಿ ಹಿಡಿಯಲು ಬಿಜೆಪಿ ಪ್ರತಿ ವಾರ್ಡ್‌ನಲ್ಲೂ ಪ್ರತಿಭಟನೆ ನಡೆಸಲಿದೆ. ನಗರದ ರಸ್ತೆಗಳೆಲ್ಲವೂ ಬಂದ್ ಆಗಿದ್ದು, ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ಜನರಿದ್ದಾರೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಂಗಳೂರಿನ ಅಭಿವೃದ್ಧಿಗೆ ಒಂದು ರೂಪಾಯಿ ಅನುದಾನ ನೀಡಿಲ್ಲ ಎಂದು ದೂರಿದರು.

ಭಾರೀ ಮಳೆಯ ಸಂದರ್ಭದಲ್ಲಿಯೂ ಸಹ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ತಾವು ಸಿದ್ಧರಾಗಿರುವುದಾಗಿ ಆಯುಕ್ತರು ಹೇಳುತ್ತಾರೆ. ಆದರೆ, ಹೇಳಿಕೆ ಕೇವಲ ಭಾಷಣವಾಗಿ ಉಳಿದಿದೆ. ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೆಯೇ ಉಳಿದಿವೆ. ಸರ್ಕಾರ ಆಸ್ತಿ ಮತ್ತು ವಾಹನ ನೋಂದಣಿ ತೆರಿಗೆಯನ್ನು ಹೆಚ್ಚಿಸಿದೆ. ಆದರೆ ಅದು ಬೆಂಗಳೂರಿನ ಜನರಿಗೆ ಸಹಾಯ ಆಗುತ್ತಿಲ್ಲ. ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ಕಸ ನಿರ್ವಹಣೆಯೂ ಪರಿಣಾಮಕಾರಿಯಾಗಿ ಆಗುತ್ತಿಲ್ಲ. ಬೆಂಗಳೂರಿನಲ್ಲಿ ಗರಿಷ್ಠ ಸಂಖ್ಯೆಯ ಸಚಿವರಿದ್ದರೂ ನಗರದ ಅಭಿವೃದ್ಧಿ ಬಗ್ಗೆ ಯಾರೂ ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು.

ಬೆಂಗಳೂರಿನ ಜನತೆಗೆ ನ್ಯಾಯ ದೊರಕಿಸಿಕೊಡಲು ಪ್ರತಿಭಟನೆ ನಡೆಸಲಾಗುತ್ತಿದೆ. ಇದು ಕೇವಲ ರಾಜಕೀಯ ಉದ್ದೇಶಕ್ಕಾಗಿ ನಡೆಸುತ್ತಿರುವ ಪ್ರತಿಭಟನೆಯಲ್ಲ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ರೀತಿಯಲ್ಲಿ ಕಾರ್ಯತಂತ್ರ ರೂಪಿಸಲಾಗಿದೆ. ಬೆಂಗಳೂರಿನ ಶಾಸಕರು, ಮಾಜಿ ಶಾಸಕರು ಮತ್ತು ಕಾರ್ಪೊರೇಟರ್‌ಗಳ ಸಭೆಯಲ್ಲಿ ನಗರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು ಎಂದು ವಿಜಯೇಂದ್ರ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್