ಉಡುಪಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಉಡುಪಿ ತಾಲೂಕಿನ ಶಿರ್ವ ಮಾಣಿಬೆಟ್ಟು ಬಳಿ ಸಿಡಿಲು ಬಡಿದು 20 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ತಡರಾತ್ರಿ ನಡೆದ ಈ ಘಟನೆಯಲ್ಲಿ ರಕ್ಷಿತ್ ಪೂಜಾರಿ ಎಂಬ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.
ಪೊಲೀಸರ ಪ್ರಕಾರ, ಪೂಜಾರಿ ಅವರು ತಮ್ಮ ಮನೆಯ ಹೊರಾಂಗಣ ವಾಶ್ ರೂಂ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ಕೂಡಲೇ ಅವರನ್ನು ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಶಿರ್ವ ಮಾಣಿಬೆಟ್ಟುವಿನ ತೋಟದಮನೆಯಲ್ಲಿ ವಾಸಿಸುತ್ತಿದ್ದ ರಕ್ಷಿತ್ ಪೂಜಾರಿ ಅವರು ಶಿರ್ವದ MSRS ಕಾಲೇಜಿನಲ್ಲಿ ಎರಡನೇ ವರ್ಷದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್(BCA) ಮಾಡುತ್ತಿದ್ದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.