ಕೇಂದ್ರ ಸಚಿವ ಪ್ರಲ್ಹಾದ ಜೋಶಿ 
ರಾಜ್ಯ

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಕೆಲವು ಪ್ರಕ್ರಿಯೆ ಅಗತ್ಯ: ಪ್ರಲ್ಹಾದ ಜೋಶಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಕೆಲವು ವಿಧಾನಗಳನ್ನು ಅನುಸರಿಸಬೇಕಾಗಿದೆ ಮತ್ತು ಅವರನ್ನು ದೇಶಕ್ಕೆ ಕರೆತರುವಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಕರಿಸಲು ಕೇಂದ್ರವು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗುರುವಾರ ಹೇಳಿದರು.

ಕಲಬುರಗಿ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಕೆಲವು ವಿಧಾನಗಳನ್ನು ಅನುಸರಿಸಬೇಕಾಗಿದೆ ಮತ್ತು ಅವರನ್ನು ದೇಶಕ್ಕೆ ಕರೆತರುವಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಕರಿಸಲು ಕೇಂದ್ರವು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗುರುವಾರ ಹೇಳಿದರು.

ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಏಕಾಏಕಿ ರದ್ದುಗೊಳಿಸಲು ಸಾಧ್ಯವಾಗುವುದಿಲ್ಲ. ಆಪಾದಿತ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿ ನ್ಯಾಯಾಲಯದ ಮೆಟ್ಟಿಲೇರಿದೆ. ಪ್ರಜ್ವಲ್ ವಿಚಾರಣೆ ಎದುರಿಸಬೇಕು ಮತ್ತು ತಪ್ಪಿತಸ್ಥರಾಗಿದ್ದರೆ ಶಿಕ್ಷೆಯಾಗಬೇಕು ಎಂದು ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರ ನನ್ನ ಪ್ರಶ್ನೆಗಳಿಗೆ ಇನ್ನೂ ಉತ್ತರಿಸಿಲ್ಲ. 'ಅಶ್ಲೀಲ ವಿಡಿಯೋಗಳಿದ್ದ ಮೊದಲ ಪೆನ್ ಡ್ರೈವ್ ಏಪ್ರಿಲ್ 21 ರಂದು ಹೊರಬಂದಿತು. ಪ್ರಜ್ವಲ್ ಏಪ್ರಿಲ್ 27 ರಂದು ವಿದೇಶಕ್ಕೆ ತೆರಳಿದರು. ಅಲ್ಲಿಯವರೆಗೆ ಅವರು (ರಾಜ್ಯ ಸರ್ಕಾರ) ಏನು ಮಾಡುತ್ತಿದ್ದರು?. ಒಕ್ಕಲಿಗ ಮತಗಳು ಕೈತಪ್ಪಿ ಹೋಗಬಹುದೆಂಬ ಭಯದಿಂದ ರಾಜ್ಯ ಸರ್ಕಾರ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ದೂರಿದರು.

ಟಿಎಂಸಿ ಆಡಳಿತದಲ್ಲಿ 2011ರಿಂದ ಪಶ್ಚಿಮ ಬಂಗಾಳದಲ್ಲಿ ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಒಬಿಸಿ ಪ್ರಮಾಣಪತ್ರಗಳನ್ನು ರದ್ದುಗೊಳಿಸಿರುವ ಕಲ್ಕತ್ತಾ ಹೈಕೋರ್ಟಿನ ಆದೇಶವನ್ನು 'ಒಪ್ಪಿಕೊಳ್ಳುವುದಿಲ್ಲ' ಎಂದು ಹೇಳಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ, ಸಂವಿಧಾನದ ಪ್ರಕಾರ ನ್ಯಾಯಾಲಯಗಳನ್ನು ರಚಿಸಲಾಗಿರುವುದರಿಂದ ಟಿಎಂಸಿ ಮತ್ತು ಇಂಡಿಯಾ ಮೈತ್ರಿಕೂಟ ಸಂವಿಧಾನವನ್ನು ಎಷ್ಟರ ಮಟ್ಟಿಗೆ ಗೌರವಿಸುತ್ತದೆ ಎಂಬುದನ್ನು ಇದು ತೋರಿಸುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ