ಬಂಧಿತ ಮೂವರು ಪಶ್ಚಿಮ ಬಂಗಾಳದ ಆರೋಪಿಗಳು 
ರಾಜ್ಯ

ಬೆಂಗಳೂರು: ಮೃತ ಪೋಲೀಸ್ ಗುರುತಿನ ಚೀಟಿ ಬಳಸಿ ಸಂಚಾರ ಉಲ್ಲಂಘನೆ ದಂಡ ವಸೂಲಿ; ಮೂವರ ಬಂಧನ

ನಗರದ ಮೃತ ಹೆಡ್ ಕಾನ್‌ಸ್ಟೇಬಲ್ ಗುರುತಿನ ಚೀಟಿ ಬಳಸಿಕೊಂಡು ಸಾರ್ವಜನಿಕರಿಂದ ಸಂಚಾರ ನಿಯಮ ಉಲ್ಲಂಘನೆ ಶುಲ್ಕ ವಸೂಲಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮೂವರನ್ನು ಬಂಧಿಸಲಾಗಿದೆ.

ಬೆಂಗಳೂರು: ನಗರದ ಮೃತ ಹೆಡ್ ಕಾನ್‌ಸ್ಟೇಬಲ್ ಗುರುತಿನ ಚೀಟಿ ಬಳಸಿಕೊಂಡು ಸಾರ್ವಜನಿಕರಿಂದ ಸಂಚಾರ ನಿಯಮ ಉಲ್ಲಂಘನೆ ಶುಲ್ಕ ವಸೂಲಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮೂವರನ್ನು ಬಂಧಿಸಲಾಗಿದೆ.

ಪೊಲೀಸರು ಆರೋಪಿಗಳನ್ನು ಇಸ್ಮಾಯಿಲ್ ಅಲಿ, ರಂಜನ್ ಕುಮಾರ್ ಪುರ್ಬೆ ಮತ್ತು ಸುಬೀರ್ ಎಂದು ಗುರುತಿಸಿದ್ದಾರೆ, ಎಲ್ಲರೂ ಕಾಲೇಜು ಬಿಟ್ಟವರಾಗಿದ್ದಾರೆ. ಆರೋಪಿಗಳು ಇಂಟರ್‌ನೆಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡಿರುವ ಹೆಡ್ ಕಾನ್‌ಸ್ಟೆಬಲ್ ಐಡಿಯನ್ನು ಬಳಸುತ್ತಿದ್ದರು ಮತ್ತು ಸಂಚಾರ ಉಲ್ಲಂಘನೆಯ ದಂಡದ ಮೊತ್ತವನ್ನು ಪಾವತಿಸಲು ಸಾರ್ವಜನಿಕರನ್ನು ವಾಟ್ಸಾಪ್‌ನಲ್ಲಿ ಸಂಪರ್ಕಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಂಚಕರು ಬೆಂಗಳೂರು ಟ್ರಾಫಿಕ್ ಪೊಲೀಸ್ ವೆಬ್‌ಸೈಟ್‌ನಲ್ಲಿ ಫೈನ್ ವಿಭಾಗದಲ್ಲಿ ಒಂದಷ್ಟು ವಾಹನಗಳ ನೋಂದಣಿ ಸಂಖ್ಯೆಗಳನ್ನು ಹಾಕಿ ಶೋಧಿಸಿದ್ದಾರೆ. ಆಗ ದಂಡ ಬಾಕಿರುವ ವಾಹನಗಳ ಸಂಖ್ಯೆಗಳನ್ನು ಗುರುತಿಸಿಕೊಂಡು, ಅವುಗಳನ್ನು ಕರ್ನಾಟಕ ಸಾರಿಗೆ ಇಲಾಖೆಯ ವೆಬ್‌ಸೈಟ್‌ಗಳಲ್ಲಿ ದಾಖಲಿಸಿ, ವಾಹನಗಳ ಮಾಲೀಕರ ವಿಳಾಸ, ಮೊಬೈಲ್ ನಂಬರ್ ಪಡೆದುಕೊಳ್ಳುತ್ತಿದ್ದರು. ಬಳಿಕ ನಿರ್ದಿಷ್ಟ ವಾಹನ ಮಾಲೀಕರ ವಾಟ್ಸ್​ಆ್ಯಪ್​ಗೆ ನಾವು ಟ್ರಾಫಿಕ್ ಪೊಲೀಸರು ಹೇಳಿಕೊಂಡು ದಂಡ ಕಟ್ಟುವಂತೆ ಕ್ಯೂಆರ್ ಕೋಡ್ ಸಮೇತ ಸಂದೇಶ ಹಾಗೂ ಮೃತ ಭಕ್ತರಾಮ್ ಗುರುತಿನ ಚೀಟಿ ಕೂಡ ಕಳುಹಿಸಿದ್ದರು.

ಹೆಡ್ ಕಾನ್ ಸ್ಟೇಬಲ್ ಪುತ್ರಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮೂವರು ಆರೋಪಿಗಳನ್ನು ಕೋಲ್ಕತ್ತಾದಲ್ಲಿ ಬಂಧಿಸಿದ್ದಾರೆ. ಪೊಲೀಸ್ ಗುರುತಿನ ಚೀಟಿ ಲಭ್ಯತೆ ಮತ್ತು ಸಾರ್ವಜನಿಕರ ಸಂಪರ್ಕಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್