ನಟಿ ಹೇಮಾ
ರಾಜ್ಯ

ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾಗೆ ಸಿಸಿಬಿ ನೋಟಿಸ್, ಮೇ 27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಮೇ.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಮೇ.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ತಾವು ಹೈದರಾಬಾದ್‍ನಲ್ಲಿ ಇರುವುದಾಗಿ ಹೈಡ್ರಾಮಾ ಮಾಡಿದ್ದರು.

ಇತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಹೇಮಾ ಅವರು ಡ್ರಗ್ಸ್ ಪಾರ್ಟಿಯಲ್ಲಿ ಇದ್ದರು ಎಂಬುದಾಗಿ ಸ್ಪಷ್ಟನೆ ನೀಡಿದ್ದರು.

ಹೇಮಾ ಅವರ ರಕ್ತದ ಮಾದರಿ ತೆಗೆದುಕೊಂಡು ಅವರನ್ನು ಕಳುಹಿಸಲಾಗಿತ್ತು. ಮೆಡಿಕಲ್ ಟೆಸ್ಟ್ ಬಳಿಕ ಸ್ಟೇಷನ್ ಬೇಲ್ ಮೇಲೆ ಹೇಮಾರನ್ನು ಬಿಡುಗಡೆ ಮಾಡಲಾಗಿದೆ ಎಂದು ದಯಾನಂದ್ ಹೇಳಿದ್ದರು.

ಈ ನಜುವೆ ಪಾರ್ಟಿಯಲ್ಲಿ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿತ್ತು.

73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!