ತೇಜಸ್ವಿ ಸೂರ್ಯ online desk
ರಾಜ್ಯ

ಕರ್ನಾಟಕದ ಕಾನೂನು & ಸುವ್ಯವಸ್ಥೆಯ ಸಂಪೂರ್ಣ ಜವಾಬ್ದಾರಿಯನ್ನು ಕಾಂಗ್ರೆಸ್ ಮತಾಂಧರ ಕೈಗೆ ಒಪ್ಪಿಸಿದೆ: ತೇಜಸ್ವಿ ಸೂರ್ಯ

ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದೆ.

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದೆ.

ಎರಡು ಗುಂಪಿನ ನಡುವೆ ಭಯಾನಕ ಗ್ಯಾಂಗ್ ವಾರ್ ನಡೆದಿರುವ ಘಟನೆ ಉಡುಪಿಯಲ್ಲಿ ವರದಿಯಾಗಿದ್ದು, ಈ ಘಟನೆಯ ವಿಡಿಯೋ ಹಂಚಿಕೊಂಡಿರುವ ತೇಜಸ್ವಿ ಸೂರ್ಯ ಕಾಂಗ್ರೆಸ್ ಸರ್ಕಾರ, ಕರ್ನಾಟಕದ ಕಾನೂನು & ಸುವ್ಯವಸ್ಥೆಯ ಸಂಪೂರ್ಣ ಜವಾಬ್ದಾರಿಯನ್ನು ಮತಾಂಧರು, ಪುಂಡರು, ಸಮಾಜ ಘಾತಕ ಶಕ್ತಿಗಳ 'ಕೈ' ಗೆ ಒಪ್ಪಿಸಿದೆ ಎಂದು ಹೇಳಿದ್ದಾರೆ.

ಸರ್ಕಾರ ಪೊಲೀಸ್ ಇಲಾಖೆಯನ್ನು ಕೈಗೊಂಬೆ ಮಾಡಿಕೊಂಡಿರುವ ಪರಿಣಾಮ ಸಾಮಾನ್ಯ ಜನತೆ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ ಎಂದು ಸಂಸದರು ಟ್ವೀಟ್ ಮಾಡಿದ್ದಾರೆ. ಗೃಹ ಸಚಿವರು ಜವಾಬ್ದಾರಿ ಮರೆತು ಉಡಾಫೆ ಉತ್ತರಗಳಿಗೆ ಸೀಮಿತರಾಗಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಅರಾಜಕತೆಯನ್ನೇ ಕರ್ನಾಟಕದ ಮಾಡೆಲ್ ಎಂದು ಬಿಂಬಿಸುತ್ತಿರುವುದು ಶೋಚನೀಯ.

ಸಮಾಜಘಾತಕ ಶಕ್ತಿಗಳಿಗೆ ಪೊಲೀಸ್ ಇಲಾಖೆ, ಕಾನೂನು & ಸುವ್ಯವಸ್ಥೆಯನ್ನು ಒತ್ತೆ ಇಟ್ಟಿರುವ ಈ ರೀತಿಯ ಮಾಡೆಲ್ ನಿಂದ ರಾಜ್ಯದ ಮಾನ ಹರಾಜು ಹಾಕುತ್ತಿರುವ ಸರ್ಕಾರದ ಬೇಜವಾಬ್ದಾರಿ ವರ್ತನೆ ರಾಜ್ಯಕ್ಕೆ ಅಂಟಿರುವ ಶಾಪ ಎಂದು ತೇಜಸ್ವಿ ಸೂರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!