ಅಪಘಾತದಲ್ಲಿ ಸಂಪೂರ್ಣ ನಜ್ಜುಗುಜ್ಜಾದ ಕಾರು  
ರಾಜ್ಯ

ಹಾಸನ: ಭೀಕರ ರಸ್ತೆ ಅಪಘಾತ, ಮಗು ಸೇರಿ 6 ಮಂದಿ ಸ್ಥಳದಲ್ಲೇ ಸಾವು

ಭಾನುವಾರ ನಸುಕಿನ ಜಾವ ಹಾಸನ ಹೊರವಲಯದ ಈಚನಹಳ್ಳಿ ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಕಾರಿನಲ್ಲಿದ್ದರು.

ಹಾಸನ: ನಿದ್ದೆ ಮಂಪರಿನಲ್ಲಿ ಚಾಲಕ ಕಾರು ಚಲಾಯಿಸಿ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಭಾನುವಾರ ನಸುಕಿನ ಜಾವ ಹಾಸನ ಹೊರವಲಯದ ಈಚನಹಳ್ಳಿ ಬಳಿ ಸಂಭವಿಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಮೂವರು ಮಹಿಳೆಯರು,ಒಂದು ಮಗು ಹಾಗೂ ಇಬ್ಬರು ಪುರುಷರು ಕಾರಿನಲ್ಲಿದ್ದರು.

ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಕಾರಿನೊಳಗಿಂದ ಶವಗಳನ್ನು ಹೊರತೆಗೆಯಲು ಪೊಲೀಸರು ಕಷ್ಟಪಟ್ಟರು.

ಶಾಸಕ ಪ್ರದೀಪ್ ಈಶ್ವರ್ ಮನವಿ: ಚಿಕ್ಕಬಳ್ಳಾಪುರ ಮೂಲದ ಆರು ಜನ, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ, ವಾಪಸ್ ಊರಿಗೆ ಹೋಗುತ್ತಿದ್ದರು. ನಸುಕಿನ ಜಾವ ಈಚನಹಳ್ಳಿ ಬಳಿ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಕಾರು ಮನೋಜ್ ಕುಮಾರ್ ಎಂಬುವರಿಗೆ ಸೇರಿದೆ. ಕಾರು ಹಾಗೂ ಕಾರಿನಲ್ಲಿ ಇದ್ದವರ ಬಗ್ಗೆ ತಕ್ಷಣ ವಿಳಾಸ ಪತ್ತೆ ಹಚ್ಚುವಂತೆ ಚಿಕ್ಕಬಳ್ಳಾಫುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಿಎಲ್ ನಾಗೇಶ ಹಾಗೂ ಆರ್​ಟಿಒ ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

SCROLL FOR NEXT