ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ 
ರಾಜ್ಯ

ಬಿಟ್ ಕಾಯಿನ್ ಹಗರಣ: ಪ್ರಮುಖ ಆರೋಪಿ ಶ್ರೀಕಿ, ಸಹಚರರ ವಿರುದ್ಧ ಕೋಕಾ ಕಾಯ್ದೆ

ಬಿಟ್‌ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀ ಕೃಷ್ಣ ರಮೇಶ್ ಮತ್ತು ಆತನ ಸಹಚರ ರಾಬಿನ್ ಖಂಡೇಲ್‌ವಾಲ್ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಅಡಿ ಎಸ್ಐಟಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರು: ಬಿಟ್‌ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀ ಕೃಷ್ಣ ರಮೇಶ್ ಮತ್ತು ಆತನ ಸಹಚರ ರಾಬಿನ್ ಖಂಡೇಲ್‌ವಾಲ್ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಅಡಿ ಎಸ್ಐಟಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

2017ರಲ್ಲಿ ತುಮಕೂರು ಸಿಇಎನ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ, ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ ಹಾಗೂ ರಾಬಿನ್ ಖಂಡೇವಾಲಾನನ್ನ ಕೋಕಾ ಕಾಯ್ದೆಯಡಿ ಜೈಲಿಗಟ್ಟಲು ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ಬಿಟ್ ಕಾಯಿನ್ ಅಕ್ರಮ ಪ್ರಕರಣದಲ್ಲಿ ಎಸ್ಐಟಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದ ಶ್ರೀಕಿಯನ್ನು ಮೇ7 ರಂದು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಆತನ ಸಹವರ್ತಿ ರಾಬಿನ್ ಖಂಡೇವಾಲಾನನ್ನು ರಾಜಸ್ಥಾನದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಇದೀಗ ಇಬ್ಬರು ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕ್ರಮ ಕೈಗೊಂಡು, ಜೈಲಿಗಟ್ಟಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏನಿದು ಕೋಕಾ ಕಾಯ್ದೆ?

ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (KCOCA) ಹೆಸರೇ ಸೂಚಿಸುವಂತೆ ಪದೇ ಪದೇ ಸಂಘಟಿತ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಆರೋಪಿಗಳನ್ನ ಈ ಕಾಯ್ದೆಯಡಿ ಬಂಧನಕ್ಕೊಳಪಡಿಸಬಹುದು. ಕೋಕಾ ಕಾಯ್ದೆಯಡಿ ಬಂಧಿಸಲ್ಪಡುವ ಅಪರಾಧಿಗೆ ಕನಿಷ್ಠ ಒಂದು ವರ್ಷ ಜಾಮೀನು ಸಿಗುವುದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

Flydubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್, 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!