ರಾಮನಗರ : ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ರಸ್ತೆಯ ಸಬ್ಬಕೆರೆ ಗೇಟ್ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಅಪಘಾತದಲ್ಲಿ ಓರ್ವ ಮಹಿಳೆ ಹಾಗೂ ಬೈಕ್ ಚಾಲಕ ಸಾವನ್ನಪ್ಪಿದ್ದಾರೆ. ಮೃತರನ್ನು ಮಾಗಡಿ ತಾಲ್ಲೂಕಿನ ಹೊನ್ನಾಪುರ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ.
ಕನಕಪುರದಿಂದ ರಾಮನಗರ ಕಡೆ ತೆರಳುತ್ತಿದ್ದ ಬೈಕ್ಗೆ ರಾಮನಗರದಿಂದ ಕನಪುರಕ್ಕೆ ತೆರಳುತ್ತಿದ್ದ ಬಸ್ ಗೆ ಬೈಕ್ ಡಿಕ್ಕಿಯಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದಲ್ಲಿ ಬಸ್ ಮುಂಭಾಗ ಹಾನಿಯಾಗಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.