ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಶಿವಮೊಗ್ಗ: ಭ್ರಷ್ಟಾಚಾರ ಆರೋಪ; ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರನ್
Nagaraja AB
Updated On : 27 May 2024, 5:07 pm

ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ.

ಚಂದ್ರಶೇಖರನ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಬೆಂಗಳೂರಿನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೂ ಮುನ್ನಾ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಮೂವರು ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದು, ಬಹುಕೋಟಿ ಭ್ರಷ್ಟಾಚಾರ ರಹಸ್ಯವನ್ನೂ ಬಹಿರಂಗಪಡಿಸಿದ್ದಾರೆ.

ಅವಮಾನ ಸಹಿಸದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರು ಡೆತ್ ನೋಟ್ ನಲ್ಲಿ ಹೇಳಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement

ನನ್ನ ಸಾವಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿದೇರ್ಶಕರಾದ ಜೆ.ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಮ್ ದುರ್ಗಣ್ಣನವರ್, ಯೂನಿಯನ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರಾದ ಶುಚಿಸ್ಮಿತ ಕಾರಣ. ವಾಲ್ಮೀಕಿ ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ.ಗಳನ್ನು ನಿಯಮ ಬಾಹಿರವಾಗಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Also Read

ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ; ಕಾರಣ ನಿಗೂಢ!

ಈ ಅವ್ಯವಹಾರದಲ್ಲಿ ನನ್ನ ಪಾತ್ರವಿಲ್ಲ. ಆದರೆ ಕೆಲಸದ ಒತ್ತಡದಲ್ಲಿ ಸದರಿ ಖಾತೆಯ ಚೆಕ್ ಪುಸ್ತಕ ಪಡೆಯದಿರುವುದು ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸದಿರುವುದು ನನ್ನ ತಪ್ಪಾಗಿದೆ. ಈ ಹಗರಣದಲ್ಲಿ ನಾನು ಕಾರಣನಲ್ಲ. ಆದ್ದರಿಂದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಮತ್ತೊಂದೆಡೆ ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಕೂಡಲೇ ಪರಿಶಿಷ್ಟ ಪಂಗಡದ ಸಚಿವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments