ನಟಿ ಹೇಮಾ 
ರಾಜ್ಯ

ರೇವ್ ಪಾರ್ಟಿ ಪ್ರಕರಣ: ವಿಚಾರಣೆಗೆ ಪೊಲೀಸರ ಮುಂದೆ ಹಾಜರಾಗಲು ಸಮಯ ಕೋರಿದ ತೆಲುಗು ನಟಿ ಹೇಮಾ

ಇತ್ತೀಚೆಗೆ ಬೆಂಗಳೂರು ನಗರದ ಹೊರವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ತೆಲುಗಿನ ಜನಪ್ರಿಯ ನಟಿ ಹೇಮಾ ಅವರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಮುಂದೆ ವಿಚಾರಣೆಗೆ ಹಾಜರಾಗಲು ಸಮಯ ಕೋರಿದ್ದಾರೆ.

ಬೆಂಗಳೂರು: ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ತೆಲುಗಿನ ಜನಪ್ರಿಯ ನಟಿ ಹೇಮಾ ಅವರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಮುಂದೆ ವಿಚಾರಣೆಗೆ ಹಾಜರಾಗಲು ಸಮಯ ಕೋರಿದ್ದಾರೆ.

ಅನಾರೋಗ್ಯದ ಕಾರಣ ನೀಡಿ ಹೇಮಾ ಅವರು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಮುಂದೆ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ್ದಾರೆ ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.

ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ನಟಿ ಹೇಮಾ ಸೇರಿದಂತೆ ಎಂಟು ಮಂದಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಉಳಿದವರು ಸೋಮವಾರ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಹೇಮಾ ಅವರಿಗೆ ಎರಡನೇ ಬಾರಿ ನೋಟಿಸ್ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಜಿಎಂ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ದಾಳಿ ನಡೆಸಿ, ಸ್ಥಳದಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿತ್ತು.

ಪ್ರಕರಣದಲ್ಲಿ ತೆಲುಗು ನಟಿಯನ್ನು ರಕ್ಷಿಸುವಂತೆ ತೆಲಂಗಾಣ ಮತ್ತು ಆಂಧ್ರಪ್ರದೇಶದ ಪ್ರಭಾವಿಗಳಿಂದ ಒತ್ತಡ ಹೇರಲಾಗುತ್ತಿದೆ. ಬಂಧಿತ ವ್ಯಕ್ತಿಗಳು ಹೆಚ್ಚು ಸಂಪರ್ಕ ಹೊಂದಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಮತ್ತು ಪ್ರಕರಣದಲ್ಲಿ ಹೆಚ್ಚಿನ ತನಿಖೆಯು ಸಂಭವನೀಯ ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದವರಿಂದ ಸಂಗ್ರಹಿಸಲಾದ 98 ರಕ್ತದ ಮಾದರಿಗಳ ಪೈಕಿ 86 ಮಂದಿ ಡ್ರಗ್ಸ್ ಸೇವಿಸಿರುವುದು ವರದಿಯಲ್ಲಿ ದೃಢಪಟ್ಟಿದೆ. 50ಕ್ಕೂ ಹೆಚ್ಚು ಪುರುಷರು ಮತ್ತು 30ಕ್ಕೂ ಹೆಚ್ಚು ಮಹಿಳೆಯರ ವರದಿ ಪಾಸಿಟಿವ್ ಬಂದಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಹಂತ ಹಂತವಾಗಿ ಅವರನ್ನು ವಿಚಾರಣೆಗೆ ಕರೆಯಲು ಮಾದಕ ದ್ರವ್ಯ ನಿಗ್ರಹ ದಳ ಸಿದ್ಧತೆ ನಡೆಸಿದೆ.

ಮೇ 20ರಂದು ಟೆಕ್ಕಿಗಳು, ತೆಲುಗು ನಟರು ಸೇರಿದಂತೆ ಸುಮಾರು 100 ಜನರು ಭಾಗವಹಿಸಿದ್ದ ‘ಸನ್‌ಸೆಟ್ ಟು ಸನ್‌ರೈಸ್ ವಿಕ್ಟರಿ’ ಶೀರ್ಷಿಕೆಯ ರೇವ್ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಪಾರ್ಟಿಯಲ್ಲಿ ಭಾಗವಹಿಸಿದ್ದವರು ಎಂಡಿಎಂಎ, ಕೊಕೇನ್, ಗಾಂಜಾ, ಚರಸ್ ಮತ್ತು ಇತರ ಮಾದಕ ವಸ್ತುಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಡ್ರಗ್ಸ್ ಪೂರೈಕೆಯ ಜೊತೆಗೆ ಸೆಕ್ಸ್ ದಂಧೆ ಕೂಡ ನಡೆಯುತ್ತಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಿಂದ ನಗರ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ವಿಭಾಗಕ್ಕೆ ಪ್ರಕರಣವನ್ನು ವರ್ಗಾಯಿಸುವ ಮುನ್ನವೇ ಐವರನ್ನು ಬಂಧಿಸಲಾಗಿತ್ತು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT