ಸಿದ್ದರಾಮಯ್ಯ, ಡಿಕೆ ಶಿವಕುಮಾರ್ online desk
ರಾಜ್ಯ

ಗುಜರಾತ್​ ಗೇಮ್ ಝೋನ್​ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಟ್ಟೆಚ್ಚರ ವಹಿಸುವಂತೆ BBMPಗೆ ಸೂಚನೆ

ಗುಜರಾತ್​ನಲ್ಲಿ ಶನಿವಾರಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 35ಕ್ಕೆ ಆಗಿದ್ದು, ಘಟನೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್​​ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ‌ಸೂಚನೆ ನೀಡಿದೆ.

ಬೆಂಗಳೂರು: ಗುಜರಾತ್​ನಲ್ಲಿ ಶನಿವಾರಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 35ಕ್ಕೆ ಆಗಿದ್ದು, ಘಟನೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್​​ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ‌ಸೂಚನೆ ನೀಡಿದೆ.

ಈ ಕುರಿತಾಗಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು, ಬೆಂಗಳೂರಿನಾದ್ಯಂತ ಶಾಪಿಂಗ್ ಮಾಲ್‌ಗಳು, ಗೇಮಿಂಗ್ ಮತ್ತು ಸಾಹಸ ವಲಯಗಳಂತಹ ಹೆಚ್ಚಾಗಿ ಜನದಟ್ಟಣೆ ಇರುವ ಮನರಂಜನಾ ಸ್ಥಳಗಳಲ್ಲಿ ಅಹಿತಕರ ಬೆಂಕಿ ಅನಾಹುತಗಳನ್ನು ತಡೆಗಟ್ಟಲು ಸೂಕ್ತವಾದ ಸುರಕ್ಷತಾ ಕ್ರಮಗಳು ಮತ್ತು ಮುನ್ನೆಚ್ಚರಿಕೆಗಳ ಅನುಸರಣೆ ಅತ್ಯಂತ ಮಹತ್ವದ್ದಾಗಿದೆ. ಅಗ್ನಿ ಅವಘಡಗಳನ್ನು ತಪ್ಪಿಸುವುದಕ್ಕಾಗಿ ನಿಯಮಿತ ತಪಾಸಣೆಗಳನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ, ನಗರದಾದ್ಯಂತ ಮನರಂಜನಾ ಸ್ಥಳಗಳಲ್ಲಿ ಸುರಕ್ಷಿತ ಕ್ರಮಗಳನ್ನು ತ್ವರಿತವಾಗಿ ಅಳವಡಿಸುವಂತೆ ಸೂಚನೆ ನೀಡಿದ್ದಾರೆ.

ಗುಜರಾತ್‌ನ ರಾಜ್ ಕೋಟ್‌ನ ಮನರಂಜನಾ ಕೇಂದ್ರದಲ್ಲಿ (ಗೇಮ್ ರೋಝನ್) ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದ್ದು, ಇದು ಅತ್ಯಂತ ಕಳವಳಿಕಾರಿ ದುರ್ಘಟನೆಯಾಗಿರುತ್ತದೆ. ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್‌ಗಳಲ್ಲಿ ಮತ್ತು ಇತರೆ ಸ್ಥಳಗಳಲ್ಲಿ ಗೇಮ್ ಝನ್ ಹಾಗೂ ಸಾಹಸ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡಲಾಗಿದ್ದು, ಇಂತಹ ಮನರಂಜನಾ ಕೇಂದ್ರಗಳು / ಗೇಮ್ ಜೋನ್‌ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕಿದೆ.

ಮಜನರಂಜನಾ ಕೇಂದ್ರ, ಗೇಮಿಂಗ್ ರೋಝನ್​​ಗಳಿರುವ ಪ್ರದೇಶದಲ್ಲಿ ಅಗ್ನಿದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಂಡು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಲು ಮತ್ತು ಈಗಾಗಲೇ ವಿಧಿಸಲಾಗಿರುವ ರಕ್ಷಣಾ ನಿಯಮ ಮತ್ತು ನಿಬರ್ಂಧಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಲು ತಿಳಿಸುತ್ತಾ, ಯಾವುದೇ ದುರ್ಘಟನೆಗಳು ಸಂಭವಿಸದಂತೆ ಕ್ರಮವಹಿಸಲು ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

ಮಂಗಳೂರು: ನಕಲಿ ಆಧಾರ್ ಕಾರ್ಡ್‌ ತಯಾರಿಸಿ ಸರ್ಕಾರಿ ಇಲಾಖೆಗಳು, ನ್ಯಾಯಾಲಯಗಳಿಗೆ ವಂಚನೆ; ವ್ಯಕ್ತಿಯ ಬಂಧನ

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು

ಗುಜರಾತ್ ಫ್ಲೋರೋ ಕೆಮಿಕಲ್ ಕಂಪನಿಯಲ್ಲಿ ವಿಷಕಾರಿ ಅನಿಲ ಸೋರಿಕೆ: ಓರ್ವ ಸಾವು, 12 ಮಂದಿ ಆಸ್ಪತ್ರೆಗೆ ದಾಖಲು

SCROLL FOR NEXT