ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಜನರು 
ರಾಜ್ಯ

ಮಂಡ್ಯ: ಬೆಳ್ಳೂರಿನಲ್ಲಿ ಹಿಂದೂ ಯುವಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ, ಮನೆಗಳಿಗೆ ನುಗ್ಗಿ ಬೆದರಿಕೆ!

ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ್ದರಿಂದ ಆಕ್ರೋಶಗೊಂಡ ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್​ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ.

ಮಂಡ್ಯ: ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ್ದರಿಂದ ಆಕ್ರೋಶಗೊಂಡ ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್​ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ.

ಮುಸ್ಲಿಂ ಯುವಕರ ಗುಂಪು ಅಭಿಲಾಷ್ ಮೇಲೆ ಹಲ್ಲೆ ನಡೆಸಿದ್ದು ಇದನ್ನು ತಡೆಯಲು ಬಂದ ಹಿಂದೂ ಯುವಕರ ಮೇಲೆ ಗುಂಪು ಹಲ್ಲೆ ಮಾಡಿದೆ. ಅಷ್ಟೇ ಅಲ್ಲದೆ ಹಿಂದೂ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ್ದು ಸದ್ಯ ಬೆಳ್ಳೂರಿನಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.

ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್​ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬಳಿಕ ಬೆಳ್ಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಟಾಗಿದ್ದು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಶ್ರಮ ವಹಿಸುತ್ತಿದ್ದಾರೆ.

ಬೆಳ್ಳೂರಿನ ಸಂತೆ ಬೀದಿಯಲ್ಲಿ ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಅತಿ ವೇಗದಲ್ಲಿ ಕಾರು ಓಡಿಸಿಕೊಂಡು ಹೋಗಿದ್ದರು. ಇದನ್ನು ಅಭಿಲಾಷ್ ಹಾಗೂ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಅಲ್ಲದೆ ವೇಗವಾಗಿ ಕಾರು ಓಡಿಸದಂತೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು.

ಇದರಿಂದ ಆಕ್ರೋಶಗೊಂಡಿದ್ದ ಮುಸ್ಲಿಂ ಯುವಕರು ದೊಡ್ಡ ಸಂಖ್ಯೆಯಲ್ಲಿ ಗುಂಪು ಕಟ್ಟಿಕೊಂಡು ಬಂದು ಇಂದು ಅಭಿಲಾಷ್ ನನ್ನು ಟಾರ್ಗೆಟ್ ಮಾಡಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಬಳಿಕ ಕೆಲ ಹಿಂದೂಗಳ ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಿದ್ದು, ಇದರಿಂದ ಆಕ್ರೋಶಗೊಂಡಿರುವ ಜನರು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬೆಳ್ಳೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video