ಸಿಎಂ ಸಿದ್ದರಾಮಯ್ಯ 
ರಾಜ್ಯ

ಲೋಕಸಭಾ ಚುನಾವಣೆಯಲ್ಲಿ NDA ಸೋಲಿನ ಮುನ್ಸೂಚನೆ ಮೋದಿ ವಿಚಿತ್ರ ಹೇಳಿಕೆಗಳಿಗೆ ಕಾರಣ: ಸಿಎಂ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಎನ್ ಡಿ ಎ ಸೋಲು ಖಚಿತ ಎಂಬುದು ಪ್ರಧಾನಿ ಮೋದಿಗೆ ಗೊತ್ತಾಗಿದೆ. ಹಾಗಾಗೀ ಹತಾಶರಾಗಿ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಎನ್ ಡಿ ಎ ಸೋಲು ಖಚಿತ ಎಂಬುದು ಪ್ರಧಾನಿ ಮೋದಿಗೆ ಗೊತ್ತಾಗಿದೆ. ಹಾಗಾಗೀ ಹತಾಶರಾಗಿ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ ಎಂದರು.

ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಸಂವಿಧಾನದ ಆಶಯಗಳಲ್ಲಿ ದೇಶವನ್ನು ಮುನ್ನಡೆಸುವುದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರೂ, ಇಂದಿರಾಗಾಂಧಿ ಅವಧಿಯಲ್ಲಿ ಭೂ ಸುಧಾರಣೆ ಮಾಡಿದರು‌. ಕೈಗಾರಿಕೆಗಳನ್ನು ಸ್ಥಾಪಿಸಿದರು. ಈಗ ಬಿಜೆಪಿ ಇದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದೆ. ರೈತರಿಂದ ಭೂಮಿ ಕಿತ್ತುಕೊಳ್ಳುವುದು , ದೇಶದ ಕೈಗಾರಿಕೆಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆ.ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು ಎಂದು ಹೇಳಿದರು.

ತಮ್ಮನ್ನು ತೀವ್ರವಾಗಿ ಟೀಕಿಸುತ್ತಿದ್ದ ಲೋಹಿಯಾ ಅವರ ಮಾತನ್ನು ಪಾರ್ಲಿಮೆಂಟಿನಲ್ಲಿ ಕುಳಿತು ನೆಹರೂ ಆಲಿಸುತ್ತಿದ್ದರು. ಸ್ಪಂದಿಸುತ್ತಿದ್ದರು‌. ಇದು ನೆಹರೂ ರೂಢಿಸಿಕೊಂಡಿದ್ದ ರಾಜಕೀಯ ಮೌಲ್ಯ. ನಮ್ಮ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಸರಣಿ ಸುಳ್ಳುಗಳನ್ನು ಹೇಳುತ್ತಿದೆ. 28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿಗೆ ಈಗ ಸತ್ಯ ಗೊತ್ತಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ ಲೋಕಸಭೆಯಲ್ಲಿ ಕಾಂಗ್ರೆಸ್ 15-20 ಸ್ಥಾನ ಗೆದ್ದೇ ಗೆಲ್ಲುತ್ತದೆ. 28 ಕ್ಕೆ 28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿ ಬಾಯಿ ಬಂದಾಗಿದೆ. ಇಡೀ ದೇಶದಲ್ಲಿ ಬಿಜೆಪಿ ತಿರಸ್ಕೃತಗೊಂಡಿದೆ ಎಂದರು.

ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಬಣ್ಣಿಸಿದ ಸಿದ್ದರಾಮಯ್ಯ,ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು ಎಂದು ವಿವರಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಅನಕ್ಷರತೆ, ಬಡತನ, ನಿರುದ್ಯೋಗ ವ್ಯಾಪಕವಾಗಿತ್ತು. ಆರ್ಥಿಕ ಚೈತನ್ಯ ಇರಲಿಲ್ಲ. ಹಳ್ಳಿಗಳು ಸಂಕಷ್ಟದಲ್ಲಿದ್ದವು. ಈ ಎಲ್ಲಕ್ಕೂ ಪರಿಹಾರವಾಗಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಜೀವನದುದ್ದಕ್ಕೂ ಶ್ರಮಿಸಿದರು. ದೇಶವನ್ನು ವೈಜ್ಞಾನಿಕ , ಆಧುನಿಕತೆ ಆಧಾರದಲ್ಲಿ ನಿರ್ಮಿಸುತ್ತಾ ಭಾರತೀಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ನಿರಂತರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು ಎಂದು ವಿವರಿಸಿದರು.

ದೇಶದಲ್ಲಿರುವ ಬಹುತೇಕ ಅಣೆಕಟ್ಟುಗಳು ಆಗಿದ್ದು ನೆಹರೂ ಅವಧಿಯಲ್ಲಿ. ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುವ ನರೇಂದ್ರ ಮೋದಿ ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲೂ ಸ್ಥಾಪಿಸಲಿಲ್ಲ. ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ನೆಹರೂ ಮತ್ತು ಭಾರತೀಯರು ಬ್ರಿಟಿಷರ ವಿರುದ್ಧ ಹೋರಾಡುತ್ತಾ ಜೈಲು ವಾಸ ಅನುಭವಿಸುತ್ತಿದ್ದಾಗ ಆರ್ ಎಸ್ ಎಸ್ ಮತ್ತು ಸಂಘ ಪರಿವಾರ ಬ್ರಿಟೀಷರ ವಿರುದ್ಧ ನೆಪಕ್ಕೂ ಸೊಲ್ಲೆತ್ತಲಿಲ್ಲ. ಇವರು ಈಗ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇರುವ ನಮಗೆ ದೇಶಭಕ್ತಿಯ ಪಾಠ ಮಾಡುತ್ತಾ ನಗೆಪಾಟಲಿಗೀಡಾಗಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್