ಬಿ ಎಸ್ ಯಡಿಯೂರಪ್ಪ  
ರಾಜ್ಯ

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಸಾವು

ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮಮತಾ ಎಂಬ ಮಹಿಳೆ ಮೃತಪಟ್ಟಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮಮತಾ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ತಮ್ಮ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಹಲವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ, ಈ ಸಂಬಂಧ ಎಸ್ ಐಟಿ ತನಿಖೆಗೆ ಸಹಕರಿಸಬೇಕೆಂದು ಮಾಜಿ ಸಿಎಂ ಯಡಿಯೂರಪ್ಪನವರ ಮನೆಗೆ ಹೋಗಿದ್ದಾಗ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಆರೋಪಿಸಿದ್ದರು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಬಾಲಕಿಗೆ ಮತ್ತು ಆಕೆಯ ತಾಯಿಗೆ ಸಹಾಯ ಮಾಡುವ ಬದಲು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಯಡಿಯೂರಪ್ಪ ವಿರುದ್ಧವೇ ಆರೋಪ ಮಾಡಿದ್ದರು. ಆದರೆ ಈ ಆರೋಪವನ್ನು ಯಡಿಯೂರಪ್ಪ ಅವರು ಸ್ಪಷ್ಟವಾಗಿ ನಿರಾಕರಿಸಿದ್ದರು. ಈ ಆರೋಪ ದುರುದ್ದೇಶಪೂರಿತ ಎಂದು ಹೇಳಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

ದೂರುದಾರೆ ಮಹಿಳೆ ಕಳೆದ ಕೆಲವು ವರ್ಷಗಳಿಂದ ಶ್ವಾಸಕೋಶ ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದರು. ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆ ಕಾಣುತ್ತಿದ್ದಂತೆ ಹುಳಿಮಾವು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್