ಬೆಂಗಳೂರು ಜಲಮಂಡಳಿ 
ರಾಜ್ಯ

ಒಳಚರಂಡಿಗೆ ಮಳೆ ನೀರು ಹರಿಬಿಡುತ್ತಿರುವ ಜನರ ವಿರುದ್ಧ ಜಲಮಂಡಳಿ ʼದಂಡ ಅಭಿಯಾನʼ ಆರಂಭ

ಮಳೆ ನೀರು ಕೋಯ್ಲು ಪದ್ದತಿಯ ಅಳವಡಿಕೆಯ ಮೂಲಕ ಆ ನೀರಿನ ಸದ್ಬಳಕೆ ಮಾಡುವುದು ಕಡ್ಡಾಯವಾಗಿದೆ. ಆದರೆ, ಹಲವಾರು ಕಡೆಗಳಲ್ಲಿ ಈ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವ ಮೂಲಕ ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗುವಂತೆ ಮಾಡಲಾಗುತ್ತಿದೆ.

ಬೆಂಗಳೂರು: ಮಳೆ ನೀರು ಕೋಯ್ಲು ಪದ್ದತಿಯ ಅಳವಡಿಕೆಯ ಮೂಲಕ ಆ ನೀರಿನ ಸದ್ಬಳಕೆ ಮಾಡುವುದು ಕಡ್ಡಾಯವಾಗಿದೆ. ಆದರೆ, ಹಲವಾರು ಕಡೆಗಳಲ್ಲಿ ಈ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವ ಮೂಲಕ ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗುವಂತೆ ಮಾಡಲಾಗುತ್ತಿದೆ. ಮಳೆ ನೀರು ಇಂಗಿಸುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಮಳೆ ನೀರನ್ನು ನೇರವಾಗಿ ಒಳಚರಂಡಿಗೆ ಹರಿಯಬಿಡುತ್ತಿರುವ ಜನರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಬೆಂಗಳೂರು ಜಲಮಂಡಳಿ ಸೂಚನೆ ನೀಡಿದೆ.

ಮೇ 27ರಂದು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿದ ಜಲಮಂಡಳಿ ಅಧ್ಯಕ್ಷ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌, “ಬೆಂಗಳೂರಿನಲ್ಲಿ ಬೀಳುವ ಮಳೆಯನ್ನ ಸಮರ್ಪಕವಾಗಿ ಬಳಕೆ ಮಾಡುವುದರಿಂದ ನಗರದ ಅಂತರ್ಜಲ ಮಟ್ಟವನ್ನು ಗಣನೀಯವಾಗಿ ಹೆಚ್ಚಿಸಬಹುದಾಗಿದೆ. ಕೆಲವಡೆ ಮಳೆ ನೀರು ಕೊಯ್ಲು ಪದ್ದತಿಯ ಮೂಲಕ ಸಂಗ್ರಹಿಸಲಾದ ನೀರನ್ನು ಒಳಚರಂಡಿಗೆ ನೇರವಾಗಿ ಹರಿಯಬಿಡಲಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಇದರಿಂದ ಮಳೆ ನೀರು ಒಳಚರಂಡಿಗೆ ಸೇರ್ಪಡೆಗೊಂಡು ಪೋಲಾಗುವುದಲ್ಲದೇ, ಒಳಚರಂಡಿ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚಿಸುತ್ತಿದೆ. ಇದನ್ನ ತಡೆಗಟ್ಟುವುದು ಹಾಗೂ ಜನರು ಮಳೆ ನೀರನ್ನು ಸಮರ್ಪಕವಾಗಿ ಹಿಡಿದು ಅದನ್ನು ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ದೇಶಿಸಿದ್ದರು. ಈ ಹಿನ್ನಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸೇವಾ ಕೇಂದ್ರಗಳ ವ್ಯಾಪ್ತಿಯಲ್ಲಿ ನೇರವಾಗಿ ಒಳಚರಂಡಿಗೆ ಮಳೆ ನೀರನ್ನು ಹರಿಸುತ್ತಿರುವ ಬಗ್ಗೆ ಸರ್ವೆ ಮಾಡಬೇಕು. ನೇರವಾಗಿ ಒಳಚರಂಡಿಗೆ ಸೇರುತ್ತಿರುವ ನೀರನ್ನ ತಡೆಗಟ್ಟಬೇಕು ಹಾಗೂ ಹೀಗೆ ಮಾಡುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು.

ಮಳೆ ನೀರು ಕೋಯ್ಲು ಪದ್ದತಿಯನ್ನು ಅಳವಡಿಸಿಕೊಳ್ಳಲು ಸಾಧ್ಯವಿರುವ ಆದರೆ ಇದುವರೆಗೂ ಅಳವಡಿಸಿಕೊಳ್ಳದೇ ಇರುವಂತಹ ಕಟ್ಟಡಗಳ ಜಲಮಂಡಳಿಯ ವತಿಯಿಂದ ಬಗ್ಗೆ ಸಮೀಕ್ಷೆಯನ್ನು ನಡೆಸಲಾಗುವುದು. ಈ ಮೂಲಕ ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿಕೊಳ್ಳದೇ ಇರುವ ಹಾಗೂ ಅಳವಡಿಸಿಕೊಳ್ಳುವ ಮೂಲಕ ಆಗುತ್ತಿರುವ ಅನುಕೂಲತೆಗಳ ಬಗ್ಗೆ ಮಾಹಿತಿಯನ್ನು ಕ್ರೋಡೀಕರಿಸಲಾಗುವುದು. ನಗರದಲ್ಲಿ ಬೀಳುತ್ತಿರುವ ಮಳೆಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡುವ ಮೂಲಕ ನಗರದ ನೀರಿನ ಅಭಾವವನ್ನು ನಿರ್ವಹಿಸಲು ಸಾಧ್ಯವಿದೆ. ಈ ಬಗ್ಗೆ ಉಪಮುಖ್ಯಮಂತ್ರಿಗಳು ನೀಡಿರುವ ನಿರ್ದೇಶನದಂತೆ ಮುಂಜಾಗ್ರತಾ ಕ್ರಮಗಳಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ನೀರಿನ ಕೊರತೆಯನ್ನು ನಿರ್ವಹಿಸಿದ ರೀತಿಯಲ್ಲಿಯೇ ಮಳೆಗಾಲವನ್ನು ನಿರ್ವಹಿಸಲು ಇದು ಬಹಳ ಮುಖ್ಯ ಕ್ರಮವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT