ಆತ್ಮಹತ್ಯೆಗೆ ಶರಣಾದ ಅಧಿಕಾರಿ ಚಂದ್ರಶೇಖರನ್ 
ರಾಜ್ಯ

KMVSTDC ಅಧಿಕಾರಿ ಆತ್ಮಹತ್ಯೆ: ಮೂವರು ಉನ್ನತ ಅಧಿಕಾರಿಗಳ ವಿರುದ್ಧ FIR; ಆರೋಪಿಗಳು ನಾಪತ್ತೆ!

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿ) ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರು ಉನ್ನತ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ.

ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿ) ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರು ಉನ್ನತ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿ) ಅಕೌಂಟ್ಸ್ ಅಧಿಕಾರಿ ಚಂದ್ರಶೇಖರನ್ ಪಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದಾರೆ. ಡೆತ್ ನೋಟ್ ನಲ್ಲಿ ತಮ್ಮ ಸಾವಿಗೆ ಕಾರಣ ಎಂದು ಹೇಳಿ ಮೂವರು ಉನ್ನತ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದು, ಇದರ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಕೆಎಂವಿಎಸ್‌ಟಿಡಿಸಿ ಅಧಿಕಾರಿ 48 ವರ್ಷದ ಚಂದ್ರಶೇಖರನ್ ಪಿ ಅವರು ತಮ್ಮ ಸ್ವಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದು, ಬೆಂಗಳೂರಿನಲ್ಲಿ ನಿಯೋಜಿತರಾಗಿರುವ ಚಂದ್ರಶೇಖರನ್ ಪಿ ಅವರು ಭಾನುವಾರ ಸಂಜೆ ತಮ್ಮ ನಿವಾಸದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ.

ಸಾವಿಗೂ ಮುನ್ನ ಅವರು ಸುಮಾರು ಆರು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ. ಸೂಸೈಡ್ ನೋಟ್‌ನಲ್ಲಿ, ಅವರು ತಮ್ಮ ಸಾವಿಗೆ ಮೂವರು ಹಿರಿಯ ಸಹೋದ್ಯೋಗಿಗಳು ಕಾರಣರಾಗಿದ್ದು, ಅವರು ಸಂಸ್ಥೆಯ ಸುಮಾರು 87 ಕೋಟಿ ರೂಪಾಯಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಚಂದ್ರಶೇಖರನ್ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮೂವರು ಅಧಿಕಾರಿಗಳು ವಿವಿಧ ಠೇವಣಿಗಳ ಮೂಲಕ ವೈಯಕ್ತಿಕ ಲಾಭಕ್ಕಾಗಿ ಸುಮಾರು 87 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿದ್ದು, ಮಾತ್ರವಲ್ಲದೇ ತನಗೆ ಕಿರುಕುಳ ನೀಡಿದ್ದಾರೆ. ಪಾಲಿಕೆಯ ಪ್ರಾಥಮಿಕ ಖಾತೆಯಿಂದ ಲೆಕ್ಕಕ್ಕೆ ಸಿಗದ ಹಣವನ್ನು ಬೇರೆಡೆಗೆ ತಿರುಗಿಸಲು ಸಮಾನಾಂತರ ಬ್ಯಾಂಕ್ ಖಾತೆ ತೆರೆಯುವಂತೆ ಹಿರಿಯ ಅಧಿಕಾರಿಗಳು ಒತ್ತಾಯಿಸಿದ್ದಾರೆ.

ಎಂಜಿ ರಸ್ತೆಯಲ್ಲಿರುವ ಬ್ಯಾಂಕ್ ಶಾಖೆಯಲ್ಲಿ ಗ್ರಾಹಕರು ಉಳಿತಾಯ ಮತ್ತು ಚಾಲ್ತಿ ಖಾತೆಗಳ ನಡುವೆ ಹಣವನ್ನು ವರ್ಗಾಯಿಸಲು ಮತ್ತು ಸ್ಥಿರ ಠೇವಣಿ ಖಾತೆಗಳನ್ನು ಲಿಂಕ್ ಮಾಡಲು ಗ್ರಾಹಕರಿಗೆ ಅನುಮತಿಸುವ ಸ್ವೀಪ್-ಇನ್ ಮತ್ತು ಸ್ವೀಪ್-ಔಟ್ ಖಾತೆಯನ್ನು ತೆರೆಯಲು ಸಚಿವರು ಮತ್ತು ಅಧಿಕಾರಿಯಿಂದ ನಿರ್ದೇಶಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಇದರಿಂದ ಬೇಸತ್ತು ತಾವು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಚಂದ್ರಶೇಖರ್ ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮೂವರು ಉನ್ನತ ಅಧಿಕಾರಿಗಳ ವಿರುದ್ಧ FIR

ವಾರಾಂತ್ಯದ ನಿಮಿತ್ತ ಶುಕ್ರವಾರ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಮರಳಿದ ಅವರು ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೇ ದಿನ ಸಂಜೆ ಅವರ ಪತ್ನಿ ಕವಿತಾ ಮತ್ತು ಮಗ ಭದ್ರಾವತಿಯಿಂದ ಕುಟುಂಬ ಕಾರ್ಯಕ್ರಮಕ್ಕೆ ತೆರಳಿದ್ದ ಮನೆಗೆ ಹಿಂದಿರುಗಿದಾಗ ಘಟನೆ ಬೆಳಕಿಗೆ ಬಂದಿದೆ. ಆರಂಭದಲ್ಲಿ ಶಿವಮೊಗ್ಗದ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದೆವು. ಆದರೆ ನಂತರ ಡೆತ್ ನೋಟ್ ಸಿಕ್ಕಾಗ ಮೂವರು ಸರ್ಕಾರಿ ಅಧಿಕಾರಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಅಧಿಕಾರಿ ತಿಳಿಸಿದರು.

ಆರೋಪಿಗಳು ನಾಪತ್ತೆ, ವಶಕ್ಕೆ ಪೊಲೀಸರ ಕಾರ್ಯಾಚರಣೆ

ಇನ್ನು ಚಂದ್ರಶೇಖರ್ ಆತ್ಮಹತ್ಯೆ ಬೆನ್ನಲ್ಲೇ ಆರೋಪಿ ಸರ್ಕಾರಿ ನೌಕರರು ಸದ್ಯ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮಹಜರ್ (ಸ್ಥಳ ತಪಾಸಣೆ) ಮಾಡಲಾಗಿದೆ, ಹೆಚ್ಚಿನ ತನಿಖೆಗಾಗಿ ಆತ್ಮಹತ್ಯೆ ಪತ್ರ ಮತ್ತು ಮೃತ ಖಾತೆ ಅಧಿಕಾರಿಯ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.

ಸಚಿವರ ಸ್ಪಷ್ಟನೆ

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಮಾತನಾಡಿ, ''ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ಕೆಎಂವಿಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ, ದುರ್ಗಣ್ಣ ಮತ್ತು ಸುಚಿಸ್ಮಿತಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಮತ್ತು ಅವರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ನಾವು ಅವರನ್ನು ಬಿಡುವುದಿಲ್ಲ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗಂಭೀರವಾಗಿ ಪರಿಗಣಿಸಿದ್ದಾರೆ. ಫೋರೆನ್ಸಿಕ್ ವರದಿಯಲ್ಲಿ ಎಂಡಿ ಸಹಿ ಮಾಡಿದ್ದಾರೆ ಎಂದು ಹೇಳಿದರೆ, ನಾವು ಅವರನ್ನು ಅಮಾನತುಗೊಳಿಸುತ್ತೇವೆ. ಸಾರ್ವಜನಿಕರ ಹಣದ ಸೋರಿಕೆಗೆ ನಾವು ಬಿಡುವುದಿಲ್ಲ' ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಒಂದು ಬ್ಯಾಂಕ್ ನಿಂದ ಇನ್ನೊಂದು ಬ್ಯಾಂಕ್ ಗೆ ಹಣ ವರ್ಗಾವಣೆ ಮಾಡುವಾಗ ಈ ವಂಚನೆ ನಡೆದಿದೆ ಎಂದು ಸಚಿವ ನಾಗೇಂದ್ರ ಹೇಳಿದ್ದು, ಸುಮಾರು 87 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ. ಈವರೆಗೆ 28 ಕೋಟಿ ರೂ.ಗಳನ್ನು ರಿಕವರಿ ಮಾಡಲಾಗಿದೆ. ನಾವು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರು ಮತ್ತು ನಿರ್ದೇಶಕರೊಂದಿಗೆ ಮಾತನಾಡಿದ್ದೇವೆ ಮತ್ತು ಎಲ್ಲರೂ ಮಂಗಳವಾರ ಸಂಜೆಯೊಳಗೆ 50 ಕೋಟಿ ರೂಪಾಯಿಗಳನ್ನು ಮರುಪಾವತಿಸುವುದಾಗಿ ಹೇಳಿದ್ದಾರೆ ಎಂದು ಸಚಿವರು ಹೇಳಿದರು. ಅಂತೆಯೇ ಏನಾಗಿದೆ ಎಂಬುದನ್ನು ಅಪರಾಧ ತನಿಖಾ ಇಲಾಖೆ ತನಿಖೆ ನಡೆಸಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.

ಸಚಿವ ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ ಕೂಡಲೇ ಸಚಿವ ನಾಗೇಂದ್ರ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ ಅವರು, ಸಚಿವ ನಾಗೇಂದ್ರ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ. ಅಂತೆಯೇ ದಲಿತರು ಮತ್ತು ಬುಡಕಟ್ಟು ಸಮುದಾಯಗಳಿಗೆ ಕೆಲಸ ಮಾಡುವ ನೆಪದಲ್ಲಿ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ. ಅಲ್ಲದೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅಧಿಕಾರಿಯ ಸಾವಿನ ಬಗ್ಗೆ ಪಾರದರ್ಶಕ ತನಿಖೆಗೆ ಒತ್ತಾಯಿಸುತ್ತೇನೆ ಎಂದು ಅವರು X (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT