ಓಲಾ-ಉಬರ್ ಆಟೋ (ಸಂಗ್ರಹ ಚಿತ್ರ) 
ರಾಜ್ಯ

ಓಲಾ, ಉಬರ್‌ ಆಟೋ ಸೇವೆಗೆ ಶೇ.5 ಸೇವಾ ಶುಲ್ಕ: ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಸೋಮವಾರ ಎತ್ತಿ ಹಿಡಿದಿದೆ.

ಬೆಂಗಳೂರು: ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಸೋಮವಾರ ಎತ್ತಿ ಹಿಡಿದಿದೆ.

ಆಟೋ ರಿಕ್ಷಾ ಪ್ರಯಾಣಕ್ಕೆ ನಿಗದಿ ಪಡಿಸಿರುವ ದರಕ್ಕಿಂತ ಹೆಚ್ಚಿನ ದರ ವಿಧಿಸಿ ಓಲಾ ಮತ್ತು ಉಬರ್‌ ತಮ್ಮ ಆ್ಯಪ್‌ ಮೂಲಕ ಆಟೋರಿಕ್ಷಾ ಸೇವೆ ನೀಡುತ್ತಿದ್ದು, ತಕ್ಷಣದಿಂದ ಬರುವಂತೆ ಈ ಸೇವೆಯನ್ನು ಸ್ಥಗಿತಗೊಳಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.

ರಿಟ್‌ ಅರ್ಜಿಗಳನ್ನು ವಜಾ ಮಾಡಲಾಗಿದೆ. ಈಗ ಎತ್ತಿ ಹಿಡಿಯಲಾಗಿರುವ ಸರ್ಕಾರದ ಆಕ್ಷೇಪಾರ್ಹವಾದ ಆದೇಶದ ಪ್ರಕಾರ ಮತ್ತು ನಿಗದಿಪಡಿಸಿದ ದರದ ಮೇಲೆ ಅಗ್ರಿಗೇಟರ್‌ ಸಂಸ್ಥೆಗಳಾದ ಓಲಾ ಮತ್ತು ಉಬೆರ್‌ ಶೇ. 5ರಷ್ಟು ಸೇವಾ ಶುಲ್ಕ ಸಂಗ್ರಹಿಸಲು ಅರ್ಹರಾಗಿರುತ್ತಾರೆ” ಎಂದು ನ್ಯಾಯಾಲಯ ಆದೇಶದಲ್ಲಿ ಸ್ಪಷ್ಟಪಡಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಆಟೋರಿಕ್ಷಾ ಅಗ್ರಿಗೇಟರ್‌ ಸೇವೆ ಒದಗಿಸಲು ಚಾಲ್ತಿಯಲ್ಲಿರುವ ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ಕಾಲಕಾಲಕ್ಕೆ ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ. 5ರಷ್ಟು ಸೇವಾ ಶುಲ್ಕ ಮತ್ತು ಅನ್ವಯಿಸುವ ಜಿಎಸ್‌ಟಿ ತೆರಿಗೆಯನ್ನು ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ರಾಜ್ಯದ ಎಲ್ಲಾ ಸಾರಿಗೆ ಪ್ರಾಧಿಕಾರಿಗಳಿಗೆ ರಾಜ್ಯ ಸರ್ಕಾರವು 2022ರ ನವೆಂಬರ್‌ 25ರಂದು ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಓಲಾ ಮತ್ತು ಉಬರ್‌ ಆಕ್ಷೇಪಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ