ಅಮಾನತು (ಸಾಂಕೇತಿಕ ಚಿತ್ರ) online desk
ರಾಜ್ಯ

ಬೆಳ್ಳೂರಿನಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ; ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ PSI ಅಮಾನತು

ಮಂಡ್ಯ ಜಿಲ್ಲೆಯ ನಾಗಮಂಗಲದ ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ನಡದ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್‌ಐ‌ನ್ನು ಅಮಾನತು ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದ ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ನಡದ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್‌ಐ‌ನ್ನು ಅಮಾನತು ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಬೆಳ್ಳೂರು ಠಾಣೆಯ ಬಸವರಾಜ ಚಿಂಚೋಳಿ ಅಮಾನತುಗೊಂಡ ಪಿಎಸ್‌ಐ ಆಗಿದ್ದಾರೆ. ಕರ್ತವ್ಯಲೋಪ ಕಾರಣ ನೀಡಿ ಮಂಡ್ಯ ಎಸ್‌ಪಿ ಎನ್.ಯತೀಶ್ ‌ಅಮಾನತು ಆದೇಶ ಹೊರಡಿಸಿದ್ದಾರೆ.

ಬೆಳ್ಳೂರಿನಲ್ಲಿ ಕಾರು ಓವರ್ ಟೇಕ್ ವಿಚಾರವಾಗಿ ಹಿಂದೂ ಹಾಗೂ ಮುಸ್ಲಿಂ ಯುವಕರ ಮಧ್ಯೆ ಗಲಾಟೆಯಾಗಿದ್ದು, ಬಳಿಕ ಅಭಿಲಾಷ್ ಎಂಬವನ ಮೇಲೆ ಹಲ್ಲೆ ನಡೆದಿತ್ತು. ಈ ಬಗ್ಗೆ ದೂರು ಸ್ವೀಕರಿಸದೆ ಪಿಎಸ್‌ಐ ಬಸವರಾಜ ಚಿಂಚೋಳಿ ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಬಳಿಕ ಸೋಮವಾರ ರಾತ್ರಿ 7 ಗಂಟೆ ಸಮಯದಲ್ಲಿ ಮುಸ್ಲಿಂ ಯುವಕರ ಗುಂಪಿನಿಂದ ಮತ್ತೆ ದಾಳಿಯಾಗಿತ್ತು. ಈ ವೇಳೆ ಅಭಿಲಾಷ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಕೆಲ ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಲಾಗಿದೆ ಎಂದು ಸ್ಥಳೀಯರು ಆರೋಪಿದ್ದರು. ಈ ಬಗ್ಗೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬೆಳ್ಳೂರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.

ಕಡೆಗೆ ಪ್ರಕರಣದ ಗಂಭೀರತೆ ಅರಿತು ಪೊಲೀಸರು ಈ ಸಂಬಂಧ ದೂರು ಸ್ವೀಕಾರ ಮಾಡಿದ್ದರು. ಘಟನೆ ಸಂಬಂಧ 3 ಪ್ರತ್ಯೇಕ ದೂರು ದಾಖಲಾಗಿದ್ದು, ಈ ಹಿಂದೆ ದೂರು ಸ್ವೀಕರಿಸದ ಪಿಎಸ್‌ಐ ವಿರುದ್ಧವೂ ದೂರು ನೀಡಲಾಗಿತ್ತು. ಇದೀಗ ದೂರು ಬೆನ್ನಲ್ಲೇ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಎಸ್‌ಪಿ ಯತೀಶ್ ಅಮಾನತು ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

'2ನೇ ಟೆಸ್ಟ್ ಪಂದ್ಯ ಕೂಡ ಶ್ರೀಲಂಕಾ ಕೈ ಜಾರಿ ಹೋಗಿದೆ': Harsha Bhogle ಹೇಳಿದ್ದೇನು?

MCAಗೆ FDA ಶಾಕ್: ಕ್ರಿಕೆಟ್ ಮಂಡಳಿಯ 5 ಆಹಾರ ಮಳಿಗೆಗಳ ಲೈಸೆನ್ಸ್ ಅಮಾನತು