ಪ್ರಾತಿನಿಧಿಕ ಚಿತ್ರ 
ರಾಜ್ಯ

ಚಿಕ್ಕಬಳ್ಳಾಪುರ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಶಾಲಾ ಮುಖ್ಯೋಪಾಧ್ಯಾಯನ ಬಂಧನ

ಪೊಲೀಸ್ ಮೂಲಗಳ ಪ್ರಕಾರ, ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಳು. ಒಂದು ವರ್ಷದ ಹಿಂದೆ ಶಾಲಾ ಮುಖ್ಯೋಪಾಧ್ಯಾಯ ವೆಂಕಟೇಶ್ ಎಂಬಾತ ತಮ್ಮ ಕಚೇರಿಯಲ್ಲಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಖಾಸಗಿ ಅಂಗಗಳನ್ನು ಸ್ಪರ್ಶಿಸಿದ್ದರು ಎಂದು ಆರೋಪಿಸಲಾಗಿದೆ.

ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿಯು ಗರ್ಭ ಧರಿಸುವಂತೆ ಮಾಡಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. 7ನೇ ತರಗತಿ ಓದುತ್ತಿದ್ದ 13 ವರ್ಷದ ಬಾಲಕಿಯೊಬ್ಬಳು ಶಾಲಾ ಮುಖ್ಯೋಪಾಧ್ಯಾಯರ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಗರ್ಭಿಣಿಯಾಗಿದ್ದು, ಸಂತ್ರಸ್ತೆಯ ದೂರಿನ ಮೇರೆಗೆ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಳು. ಒಂದು ವರ್ಷದ ಹಿಂದೆ ಶಾಲಾ ಮುಖ್ಯೋಪಾಧ್ಯಾಯ ವೆಂಕಟೇಶ್ ಎಂಬಾತ ತಮ್ಮ ಕಚೇರಿಯಲ್ಲಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಖಾಸಗಿ ಅಂಗಗಳನ್ನು ಸ್ಪರ್ಶಿಸಿದ್ದರು ಎಂದು ಆರೋಪಿಸಲಾಗಿದೆ.

ಆಕೆ ವಿರೋಧಿಸಿದಾಗ, ಏನೂ ಆಗುವುದಿಲ್ಲ ಎಂದು ಹೇಳಿದ ಆತ ಆರು ತಿಂಗಳ ಹಿಂದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಅದನ್ನು ಯಾರಿಗೂ ಹೇಳದಂತೆ ಹೇಳಿದ್ದಾರೆ.

ಬೇಸಿಗೆ ರಜೆ ಮುಗಿದು 8ನೇ ತರಗತಿಗೆ ಸೇರಲು ವಿದ್ಯಾರ್ಥಿನಿ ಮುಂದಾಗಿದ್ದು, ಆಕೆಯ ಆರೋಗ್ಯದಲ್ಲಾದ ಬದಲಾವಣೆಯನ್ನು ಸಂತ್ರಸ್ತೆಯ ತಾಯಿ ಗಮನಿಸಿದ್ದಾರೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ, ಆಕೆ ಗರ್ಭಿಣಿಯಾಗಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ವೆಂಕಟೇಶ್ ಅವರನ್ನು ಬಂಧಿಸಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ನಾಗೇಶ್ ಟಿಎನ್‌ಐಇಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT