ಸಚಿವ ನಾಗೇಂದ್ರ, ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಸಾಂದರ್ಭಿಕ ಚಿತ್ರ 
ರಾಜ್ಯ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಸಚಿವ ನಾಗೇಂದ್ರ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಯುವ ಸಬಲೀಕರಣ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಹೇಳಿದ್ದಾರೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಯುವ ಸಬಲೀಕರಣ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಕುರಿತು ಸಿಐಡಿ ತನಿಖೆ ಆರಂಭಿಸಿರುವುದಾಗಿ ತಿಳಿಸಿದರು. 2023-24 ಮತ್ತು 2024-25 ನೇ ಸಾಲಿನಲ್ಲಿ ಕಾಯ್ದಿರಿಸಿದ 187 ಕೋಟಿ ರೂ.ಗಳಲ್ಲಿ, ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ (MD) ತಿಳಿಸದೆಯೇ 88 ಕೋಟಿ ರೂ.ಗಳನ್ನು ನಿಗಮದ ಖಾತೆಯಿಂದ MG ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಮತ್ತೊಂದು ಖಾತೆಗೆ ವರ್ಗಾಯಿಸಲಾಗಿದೆ. ಈಗ 88 ಕೋಟಿ ರೂ.ಗಳಲ್ಲಿ 28 ಕೋಟಿ ವಾಪಸ್ ವರ್ಗಾವಣೆಯಾಗಿದೆ.

ಹಣ ಬಿಡುಗಡೆ ಮಾಡಬೇಕಾದರೆ ಆಡಳಿತ ಮಂಡಳಿ ಸಭೆ ನಡೆಸಬೇಕಿತ್ತು ಆದರೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಆಗಿಲ್ಲ. ಉಳಿದ ಮೊತ್ತವನ್ನು ಮತ್ತೆ ನಿಗಮದ ಖಾತೆಗೆ ವರ್ಗಾವಣೆ ಮಾಡಿಸಲಾಗುವುದು ಎಂದರು.

ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ವರದಿ ಬಂದ ನಂತರ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. ‘ತಮಗೆ ತಿಳಿಯದಂತೆ ಘಟನೆ ನಡೆದಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಮೊತ್ತದ ವರ್ಗಾವಣೆಯಲ್ಲಿ ಕೆಲವು ಬ್ಯಾಂಕ್ ಅಧಿಕಾರಿಗಳೂ ಶಾಮೀಲಾಗಿರುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದರು.

ವರ್ಗಾವಣೆ ವಿಚಾರ ತಮ್ಮ ಅರಿವಿಗೆ ಬಂದಿಲ್ಲ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ದೂರು ನೀಡಿದ್ದು, ಅವರ ಸಹಿ ಇಲ್ಲದೇ ಯೂನಿಯನ್ ಬ್ಯಾಂಕ್‌ನ ಒಂದು ಖಾತೆಯಿಂದ ಮತ್ತೊಂದು ಶಾಖೆಗೆ 88 ಕೋಟಿ ರೂ. ವರ್ಗಾವಣೆಯಾಗಿದೆ. ಹಣದ ವರ್ಗಾವಣೆ ಅಥವಾ ಹಿಂಪಡೆಯುವಿಕೆ ಬಗ್ಗೆ ಸಂದೇಶವೂ ಬಂದಿಲ್ಲ ಎಂದು ಹೇಳಿದ್ದಾರೆ. ಇದನ್ನು ಸಾಮಾನ್ಯವಾಗಿ ಎಲ್ಲಾ ಬ್ಯಾಂಕ್ ವ್ಯವಹಾರಗಳಿಗೆ ಮಾಡಲಾಗುತ್ತದೆ. ಪ್ರಕರಣದಲ್ಲಿ ಇಲಾಖೆ ಮತ್ತು ಬ್ಯಾಂಕ್‌ನ ಅಧಿಕಾರಿಗಳು ಭಾಗಿಯಾಗಿರುವ ಅನುಮಾನವನ್ನು ಹುಟ್ಟುಹಾಕುತ್ತದೆ ಎಂದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕರ ಸಹಿ ನಕಲಿ ಎಂದು ಹೇಳಿರುವುದರಿಂದ ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿದ್ದೇವೆ. ಅದರಲ್ಲಿ ಅದು ವ್ಯವಸ್ಥಾಪಕ ನಿರ್ದೇಶಕರ ಸಹಿ ಎಂದು ಹೇಳಿದರೆ ಅವರನ್ನು ವಜಾಗೊಳಿಸಲಾಗುವುದು

ಡೆತ್ ನೋಟ್‌ನಲ್ಲಿ ಎಂಡಿ ಜೆಜಿ ಪದ್ಮನಾಭ, ಹಣಕಾಸು ಅಧಿಕಾರಿ ಪರಶುರಾಮ್ ಮತ್ತು ಬ್ಯಾಂಕ್ ಮ್ಯಾನೇಜರ್ ಶುಚಿಸ್ಮಿತಾ ಅವರ ಹೆಸರಿದೆ. ಇದರ ಆಧಾರದ ಮೇಲೆ ಹಣಕಾಸು ಇಲಾಖೆ ಅಧಿಕಾರಿಗಳು ಪಾಲಿಕೆ ಕಚೇರಿಗೆ ಭೇಟಿ ನೀಡಿದ್ದು, ಹಣ ವರ್ಗಾವಣೆ ಮಾಡಲು ನಕಲಿ ಸಹಿ ಮಾಡಿರುವುದು ಗೊತ್ತಾಗಿದೆ ಎಂದು ಆರೋಪಿಸಿದರು.

ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿ ವ್ಯವಸ್ಥಾಪಕ ನಿರ್ದೇಶಕರಿಂದ ವರದಿ ಕೇಳಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪರಿಶೀಲಿಸುತ್ತಿದ್ದಾರೆ. ಬ್ಯಾಂಕ್ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT