ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ (ಸಾಂದರ್ಭಿಕ ಚಿತ್ರ) 
ರಾಜ್ಯ

ನಾಗರಹೊಳೆ-ಬಂಡೀಪುರ ಅತಿಥಿಗಳಿಗೆ ಸಫಾರಿ ವಾಹನ ಹಂಚಿಕೆಯಲ್ಲಿ ಅನುಸರಿಸುವ ವಿಧಾನದ ಬಗ್ಗೆ ವಿವರಣೆ ನೀಡಿ: JLR ಗೆ ಹೈಕೋರ್ಟ್‌ ಸೂಚನೆ

ರಾಷ್ಟ್ರೀಯ ಉದ್ಯಾನಗಳಲ್ಲಿ ಸಫಾರಿ ವಾಹನಗಳ ಹಂಚಿಕೆಗೆ ಸಂಬಂಧಿಸಿದಂತೆ ಇರುವ ನೀತಿ ಅಥವಾ ಮಾರ್ಗಸೂಚಿಗಳನ್ನು ನ್ಯಾಯಾಲಯಕ್ಕೆ ಒದಗಿಸಬೇಕು. ಈ ಕುರಿತಂತೆ ಅಫಿಡವಿಟ್‌ ಸಲ್ಲಿಸಿ ಎಂದು ಜೆಎಲ್‌ಆರ್‌ ಲಿಮಿಟೆಡ್‌ಗೆ ನಿರ್ದೇಶಿಸಿದ ಪೀಠ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿದೆ.

ಬೆಂಗಳೂರು: ಬಂಡೀಪುರ, ನಾಗರಹೊಳೆ ಮತ್ತು ಕಬಿನಿ ರಾಷ್ಟ್ರೀಯ ಉದ್ಯಾನದ ಖಾಸಗಿ ರೆಸಾರ್ಟ್‌ಗಳಲ್ಲಿ ತಂಗುವ ಅತಿಥಿಗಳಿಗೆ ಒದಗಿಸಲಾಗುವ ಸಫಾರಿ ವಾಹನಗಳನ್ನು ಯಾವ ವಿಧಾನದಲ್ಲಿ ಹಂಚಿಕೆ ಮಾಡಲಾಗುತ್ತದೆ ಎಂಬ ಬಗ್ಗೆ ವಿವರಣೆ ಸಲ್ಲಿಸಬೇಕು ಎಂದು ಹೈಕೋರ್ಟ್‌ ಮಂಗಳವಾರ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್‌ಗೆ (ಜೆಎಲ್‌ಆರ್‌) ನಿರ್ದೇಶಿಸಿದೆ.

ನಾಗರಹೊಳೆ, ಬಂಡೀಪುರ ಮತ್ತು ಕಬಿನಿ ಅಭಯಾರಣ್ಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ರೆಸಾರ್ಟ್‌ಗಳನ್ನು ಪ್ರತಿನಿಧಿಸುವ, ಕರ್ನಾಟಕ ಇಕೊ ಟೂರಿಸ್ಟ್‌ ರೆಸಾರ್ಟ್ಸ್‌ ಅಸೋಸಿಯೇಷನ್‌ ಕಾರ್ಯದರ್ಶಿ ರೋಹನ್‌ ಮಿಶ್ರಾ ಸೇರಿದಂತೆ ಒಟ್ಟು ಒಂಬತ್ತು ಜನರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ರಾಷ್ಟ್ರೀಯ ಉದ್ಯಾನಗಳಲ್ಲಿ ಸಫಾರಿ ವಾಹನಗಳ ಹಂಚಿಕೆಗೆ ಸಂಬಂಧಿಸಿದಂತೆ ಇರುವ ನೀತಿ ಅಥವಾ ಮಾರ್ಗಸೂಚಿಗಳನ್ನು ನ್ಯಾಯಾಲಯಕ್ಕೆ ಒದಗಿಸಬೇಕು. ಈ ಕುರಿತಂತೆ ಅಫಿಡವಿಟ್‌ ಸಲ್ಲಿಸಿ ಎಂದು ಜೆಎಲ್‌ಆರ್‌ ಲಿಮಿಟೆಡ್‌ಗೆ ನಿರ್ದೇಶಿಸಿದ ಪೀಠ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿದೆ.

ಮೂರೂ ಅಭಯಾರಣ್ಯಗಳಲ್ಲಿ ತಂಗುವ ಅತಿಥಿಗಳಲ್ಲಿ ಶೇ 50ರಷ್ಟು ಸಫಾರಿ ವಾಹನಗಳನ್ನು ಖಾಸಗಿ ರೆಸಾರ್ಟ್‌ಗಳಿಗೆ ಹಂಚಿಕೆ ಮಾಡುವ ಕುರಿತ ನಿರ್ಣಯಕ್ಕೆ ವಿರುದ್ಧವಾಗಿ ನಡೆದುಕೊಳ್ಳಲಾಗುತ್ತಿದೆ. ಸಫಾರಿ ವಾಹನಗಳ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ. ಹೀಗಾಗಿ, ಸಫಾರಿ ವಾಹನಗಳ ನ್ಯಾಯಸಮ್ಮತ ಹಂಚಿಕೆ ಮತ್ತು ಈಗಿರುವ ಸೌಲಭ್ಯಗಳನ್ನು ವಿಸ್ತರಿಸುವಾಗ ಯಾವುದೇ ತಾರತಮ್ಯ ಎಸಗದಂತೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಸಫಾರಿ ವಾಹನಗಳಿಗಾಗಿ ಕ್ಯಾಂಟರ್‌ ಮತ್ತು ಜೀಪ್‌ಗಳನ್ನು ಒದಗಿಸಲಾಗುತ್ತದೆ. ಖಾಸಗಿ ರೆಸಾರ್ಟ್‌ಗಳು ಆನ್‌ಲೈನ್‌ ಮೂಲಕ ಆಸನಗಳನ್ನು ಕಾಯ್ದಿರಿಸಬಹುದಾದರೂ, ಕಾಯ್ದಿರಿಸಿದವರಿಗೆ ಜೀಪ್ ಅಥವಾ ಕ್ಯಾಂಟರ್‌ಗಳಲ್ಲಿ ಯಾವುದನ್ನು ಒದಗಿಸಲಾಗುತ್ತದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆದಾಗ್ಯೂ, ಕ್ಯಾಂಟರ್‌ಗಳಲ್ಲಿ ಪ್ರಯಾಣಿಸಿದರೆ ಸಿಗುವ ಅನುಭವ ಜೀಪ್‌ಗಳಿಗೆ ಹೋಲಿಕೆ ಮಾಡಿದರೆ ಅತ್ಯಂತ ಕಡಿಮೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಸಫಾರಿ ವಾಹನಗಳನ್ನು ಹಂಚಿಕೆ ಮಾಡುವುದು ಮತ್ತು ಅತಿಥಿಗಳಿಗೆ ಅರಣ್ಯದ ಸಫಾರಿ ಮಾರ್ಗಗಳನ್ನು ನಿಗದಿ ಮಾಡುವುದರಲ್ಲಿ ಪೂರ್ವಗ್ರಹ ಪೀಡಿತ ಭಾವನೆ ಪ್ರದರ್ಶಿಸದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಬೇಕು ಮತ್ತು ಖಾಸಗಿಯವರೆಗೂ ಸಮಾನ ಅವಕಾಶ ಲಭ್ಯವಾಗುವಂತೆ ಮಾಡಬೇಕು ಎಂದು ಮಧ್ಯಂತರ ಮನವಿಯಲ್ಲಿ ಕೋರಲಾಗಿದೆ. ಖಾಸಗಿ ರೆಸಾರ್ಟ್‌ಗಳು ನಾಗರಹೊಳೆಯಲ್ಲಿ ಶೇ 71ರಷ್ಟು ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಶೇ 83ರಷ್ಟು ಪ್ರಮಾಣದಲ್ಲಿ ಅತಿಥಿಗಳಿಗೆ ಸೇವೆ ಒದಗಿಸುತ್ತಿವೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT