ಸಾಂದರ್ಭಿಕ ಚಿತ್ರ  
ರಾಜ್ಯ

ಬಿಟ್‌ಕಾಯಿನ್ ಹಗರಣ: ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಾಧರ್​ ಬಂಧನ

ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಬುಧವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಬುಧವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ್ದಾರೆ.

ಅಧಿಕಾರ ದುರ್ಬಳಕೆ ಹಾಗೂ ಸಾಕ್ಷ್ಯನಾಶ ಆರೋಪದಡಿ ಇನ್ಸ್​ಪೆಕ್ಟರ್ ಚಂದ್ರಾಧರ್ ಅವರನ್ನು ಎಸ್ಐಟಿ ಪೊಲೀಸರು ಸುಧೀರ್ಘ ವಿಚಾರಣೆ ನಡೆಸಿ ಇಂದು​ ಬಂಧಿಸಿದ್ದಾರೆ.

ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ಚಂದ್ರಾಧರ್, ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್​ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಮೂವರು ಪೊಲೀಸರು ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.

ಪ್ರಕರಣ ಸಂಬಂಧ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್ ಆಗಿರುವ ಶ್ರೀಕೃಷ್ಣ ಆಲಿಯಾಸ್ ಶ್ರೀಕಿಯನ್ನು 2020ರಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ಈತನ ವಿರುದ್ಧ ಕೆಂಪೇಗೌಡನಗರ, ಅಶೋಕನಗರ ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಸೈಬರ್ ಕ್ರೈಂ ಠಾಣೆಯ ಇನ್ಸ್​​ಪೆಕ್ಟರ್​​ ಆಗಿದ್ದ ಚಂದ್ರಾಧರ್ ಅವರು ಶ್ರೀಕಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?