ಗೃಹ ಸಚಿವ ಜಿ.ಪರಮೇಶ್ವರ್ 
ರಾಜ್ಯ

ಪ್ರಜ್ವಲ್ ರೇವಣ್ಣನನ್ನು ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲಾಗುವುದು: ಗೃಹ ಸಚಿವ ಪರಮೇಶ್ವರ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಕ್ಷಣ ಅಲ್ಲಿಯೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಅಮಾನತುಗೊಂಡಿರುವ ಜೆಡಿಎಸ್ ಮುಖಂಡ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಕ್ಷಣ ಅಲ್ಲಿಯೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ.

ಮೇ 31 ರಂದು ತನ್ನ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ(ಎಸ್‌ಐಟಿ) ಮುಂದೆ ಹಾಜರಾಗುವುದಾಗಿ ವಿಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿದ ಎರಡು ದಿನಗಳ ನಂತರ ಪರಮೇಶ್ವರ ಅವರು ಈ ಹೇಳಿಕೆ ನೀಡಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 30 ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲು ವಿಮಾನ ಟಿಕೆಟ್ ಕಾಯ್ದಿರಿಸಿದ್ದಾರೆ ಮತ್ತು ಮೇ 31ರಂದು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ನಿರೀಕ್ಷೆಯಿದೆ.

ಈ ಕುರಿತು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಪ್ರಜ್ವಲ್ ವಿರುದ್ಧ ವಾರೆಂಟ್ ಜಾರಿಯಾಗಿರುವುದರಿಂದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಎಸ್‌ಐಟಿ ಕಾಯುತ್ತಿದೆ. ಆತನನ್ನು ಬಂಧಿಸಿ ಹೇಳಿಕೆ ಪಡೆಯಲಿದ್ದಾರೆ(ಎಸ್‌ಐಟಿ) ಎಂದರು.

ಪ್ರಜ್ವಲ್ ರೇವಣ್ಣ ಲ್ಯಾಂಡ್ ಆದ ತಕ್ಷಣ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ, "ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಬೇಕಾಗಿದೆ. ಏಕೆಂದರೆ ಅವರ ವಿರುದ್ಧ ವಾರಂಟ್ ಹೊರಡಿಸಲಾಗಿದೆ. ಆದ್ದರಿಂದ ಅವರನ್ನು ಬಂಧಿಸಬೇಕಾಗುತ್ತದೆ" ಎಂದರು.

ಅಶ್ಲೀಲ ವಿಡಿಯೋ ಬಹಿರಂಗವಾದ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ, ಮೇ 31ರಂದು ಭಾರತಕ್ಕೆ ವಾಪಸ್ಸಾಗುವುದಾಗಿ ಹೇಳಿದ್ದರು. ರೇವಣ್ಣ ಜರ್ಮಿನಿಯಿಂದ ಬೆಂಗಳೂರಿಗೆ ಬರಲು ಲುಫ್ತಾನ್ಸಾ ಏರ್​ಲೈನ್ಸ್​ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್​ ಬುಕ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT