ಪ್ರಜ್ವಲ್ ರೇವಣ್ಣ, ರಣಧೀರ್ ಜೈಸ್ವಾಲ್ 
ರಾಜ್ಯ

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ನೋಟಿಸ್: ಪ್ರತಿಕ್ರಿಯೆ ನೀಡಲು ಜೂನ್ 2 ರವರೆಗೆ ಗಡುವು- MEA

ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಮನವಿಯಂತೆ ರಾಜತಾಂತ್ರಿಕ ಪಾಸ್‌ಪೋರ್ಟ್ ನ್ನು ಏಕೆ ರದ್ದುಗೊಳಿಸಬಾರದು ಎಂದು ಕೇಳಿ ಮೇ 23 ರಂದು ಪ್ರಜ್ವಲ್ ರೇವಣ್ಣ ಅವರಿಗೆ MEA ನೋಟಿಸ್ ನೀಡಿದೆ.

ನವದೆಹಲಿ: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಅಮಾನತುಗೊಂಡಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ವಿದೇಶಾಂಗ ಸಚಿವಾಲಯ ನೀಡಿರುವ ಶೋಕಾಸ್ ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು ಜೂನ್ 2 ರವರೆಗೆ ಸಮಯಾವಕಾಶವಿದೆ.

ಪ್ರಜ್ವಲ್ ರೇವಣ್ಣ ಇಂದು ಬೆಂಗಳೂರಿಗೆ ಮರಳುತ್ತಿರುವಂತೆಯೇ ವಿದೇಶಾಂಗ ಸಚಿವಾಲಯ ಈ ವಿಷಯ ತಿಳಿಸಿದೆ. ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಮನವಿಯಂತೆ ರಾಜತಾಂತ್ರಿಕ ಪಾಸ್‌ಪೋರ್ಟ್ ನ್ನು ಏಕೆ ರದ್ದುಗೊಳಿಸಬಾರದು ಎಂದು ಕೇಳಿ ಮೇ 23 ರಂದು ಪ್ರಜ್ವಲ್ ರೇವಣ್ಣ ಅವರಿಗೆ MEA ನೋಟಿಸ್ ನೀಡಿದೆ.

ಮೇ 21 ರಂದು ಕರ್ನಾಟಕ ಸರ್ಕಾರದಿಂದ ಮನವಿ ಸ್ವೀಕರಿಸಲಾಗಿದ್ದು, ಭಾರತೀಯ ಪಾಸ್ ಪೋರ್ಟ್ ಕಾಯ್ದೆ ಪ್ರಕಾರ, ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವ ಕ್ರಮವನ್ನು ಪ್ರಾರಂಭಿಸಿದ್ದೇವೆ. ಮೇ 23 ರಂದೇ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, 10 ದಿನಗಳೊಳಗೆ ಅವರು ಪ್ರತಿಕ್ರಿಯೆ ನೀಡಬೇಕು. ಅವರ ಉತ್ತರಕ್ಕಾಗಿ ಕಾಯುತ್ತಿದ್ದೇವೆ. ಗಡುವು ಮುಗಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಕರ್ನಾಟಕ ಸರ್ಕಾರದಿಂದ ಪತ್ರ ಬಂದ ನಂತರ ಪ್ರಜ್ವಲ್ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆಯನ್ನು ವಿದೇಶಾಂಗ ಸಚಿವಾಲಯ ಪ್ರಾರಂಭಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT