ಲಿಖಿತ್ ಗೌಡ-ಚೇತನ್ TNIE
ರಾಜ್ಯ

ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಿಗೆ ಜಾಮೀನು!

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್ ಮತ್ತು ಲಿಖಿತ್ ಗೌಡಗೆ ಮೂರನೇ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿದೆ.

ಹಾಸನ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್ ಮತ್ತು ಲಿಖಿತ್ ಗೌಡಗೆ ಮೂರನೇ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿದೆ.

ಹಾಸನದ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ [ಸಿಇಎನ್] ಅಪರಾಧ ಪೊಲೀಸ್ ಠಾಣೆಯಲ್ಲಿ ಚೇತನ್ ಮತ್ತು ಲಿಖಿತ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು ಪ್ರಕರಣದಲ್ಲಿ ಇಬ್ಬರು 6 ಮತ್ತು 7ನೇ ಆರೋಪಿಗಳಾಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ ಹರಿಬಿಟ್ಟ ಆರೋಪದ ಮೇಲೆ ಹಾಸನ ತಾಲೂಕಿನ ಯಳಗುಂದದ ಚೇತನ್ ಹಾಗೂ ಚನ್ನರಾಯಪಟ್ಟಣದ ಲಿಖಿತ್ ಗೌಡ ಎಂಬುವರನ್ನು ಪೊಲೀಸರು ಬಂಧಿಸಿದ್ದರು.

ಮೇ 12ರಂದು ಎಸ್‌ಐಟಿ ಅವರನ್ನು ಬಂಧಿಸಿತ್ತು. ಚೇತನ್ ಮತ್ತು ಲಿಖಿತ್ ಗೌಡ ಬಿಜೆಪಿ ಕಾರ್ಯಕರ್ತರು ಎಂದು ಹೇಳಲಾಗಿದ್ದು, 18 ದಿನಗಳ ನಂತರ ಜಾಮೀನು ನೀಡಲಾಗಿದೆ. ಶುಕ್ರವಾರ ಹಾಸನ ಸಬ್ ಜೈಲಿನಿಂದ ಬಿಡುಗಡೆಯಾಗಲಿರುವ ಚೇತನ್ ಮತ್ತು ಲಿಖಿತ್ ಗೌಡ ಪರವಾಗಿ ಹಿರಿಯ ವಕೀಲ ಹರೀಶ್ ಬಾಬು ವಾದ ಮಂಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನೇಪಾಳದಲ್ಲಿ ನಿಷೇಧದ ಬಗ್ಗೆ ಏನಾಯಿತು ನೋಡಿಲ್ವ?': ಅಶ್ಲೀಲ ಚಿತ್ರ ನಿಷೇಧಿಸುವಂತೆ ಕೋರಿದ್ದ ಅರ್ಜಿ ಕುರಿತು ಸುಪ್ರೀಂ ಕೋರ್ಟ್

ಕೊಯಮತ್ತೂರು: ಗೆಳೆಯನೊಂದಿಗೆ ಕಾರಿನಲ್ಲಿ ಕುಳಿತಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಿಸಿ, ಲೈಂಗಿಕ ದೌರ್ಜನ್ಯ!

ಅನಿಲ್ ಅಂಬಾನಿಗೆ ED ಶಾಕ್; ಮನೆ ಸೇರಿ 3 ಸಾವಿರ ಕೋಟಿ ರೂ.ಗೂ ಹೆಚ್ಚು ಆಸ್ತಿ ಮುಟ್ಟುಗೋಲು!

ತೆಲಂಗಾಣ ರಸ್ತೆ ಅಪಘಾತ ಪ್ರಕರಣ: ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಪ್ರಧಾನಿ ಮೋದಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

VIDEO: 'ತಂಡದ ಸೋಲಿಗೆ ನೀವೇ ಕಾರಣ'.. ವಿಶ್ವಕಪ್ ಸೋಲಿನ ಬಳಿಕ ಸ್ವಂತ ದೇಶವನ್ನೇ ತೆಗಳಿದ ಆಫ್ರಿಕನ್ ನಟಿ Thanja

SCROLL FOR NEXT