ಪ್ರಜ್ವಲ್ ರೇವಣ್ಣ ಬಂಧನ 
ರಾಜ್ಯ

Prajwal Revanna Arrest: ಲೈಂಗಿಕ ಕಿರುಕುಳ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿದ ಎಸ್ಐಟಿ

ಅಶ್ಲೀಲ ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.

ದೇಶ ಬಿಟ್ಟು ಪರಾರಿಯಾದ ಒಂದು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ಅಲ್ಲದೆ ಲುಫ್ತಾನ್ಸ ವಿಮಾನದಲ್ಲಿ 30ನೇ ತಾರೀಕಿನಂದು ವಿಮಾನ ಬುಕ್ ಸಹ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದರು.

ಇದೀಗ ಲುಫ್ತಾನ್ಸ ಎಲ್ಎಚ್ 764 ವಿಮಾನದಲ್ಲಿ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ಆಗಮಿಸಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ಹಾಗೂ ಲುಕ್ ಔಟ್ ನೋಟಿಸ್ ಸಹ ಹೊರಡಿಸಲಾಗಿದೆ. ಹೀಗಾಗಿ ಮೊದಲಿಗೆ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲಿದ್ದಾರೆ. ನಂತರ ಕೆಲ ಡ್ರಾಫ್ಟ್ ಗಳನ್ನು ರಚಿಸಿ ಅದಕ್ಕೆ ಇಮಿಗ್ರೇಷನ್ ಅಧಿಕಾರಿಗಳು ಸಹಿ ಪಡೆಯಲಿದ್ದಾರೆ. ಈ ಬಗ್ಗೆ ಲೋಕಸಭೆ ಸ್ಪೀಕರ್ ಗೆ ಇಮಿಗ್ರೇಷನ್ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ.

ರಾಜ್ಯದಲ್ಲಿ ಏಪ್ರಿಲ್ 26ರಂದು ನಡೆದ ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಬಳಿಕ ಏಪ್ರಿಲ್ 27ರಂದು ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದರು. ಇದೀಗ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದಿರುವ ಎಸ್ಐಟಿ ಪೊಲೀಸರು ಎಸ್ಐಟಿ ಕಚೇರಿಗೆ ಕರೆತರುತ್ತಿದ್ದಾರೆ.

ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ಅಧಿಕಾರಿಗಳು ಇಂದು ಬೆಳಗ್ಗೆ ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ತಮ್ಮ ವಶಕ್ಕೆ ಕೇಳಲಿದ್ದಾರೆ. ಸದ್ಯ ಎಸ್ಐಟಿ ಕಚೇರಿ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ. ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!