ಬಾಲಕಿಯರು ನೀರುಪಾಲು 
ರಾಜ್ಯ

ಮತ್ತೊಂದು ದುರಂತ: ಕೊಪ್ಪಳದಲ್ಲಿ ಆಟವಾಡುವಾಗ ಕಾಲು ಜಾರಿ ಬಾವಿಗೆ ಬಿದ್ದು ಬಾಲಕಿಯರು ನೀರುಪಾಲು

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಮಕ್ಕಳು ನೀರುಪಾಲಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಕೊಪ್ಪಳದಲ್ಲಿ ಇಬ್ಬರು ಬಾಲಕಿಯರು ನೀರುಪಾಲಾಗಿರುವ ದಾರುಣ ಘಟನೆ ನಡೆದಿದೆ.

ಕೊಪ್ಪಳ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಮಕ್ಕಳು ನೀರುಪಾಲಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಕೊಪ್ಪಳದಲ್ಲಿ ಇಬ್ಬರು ಬಾಲಕಿಯರು ನೀರುಪಾಲಾಗಿರುವ ದಾರುಣ ಘಟನೆ ನಡೆದಿದೆ.

ಕೊಪ್ಪಳ ತಾಲ್ಲೂಕಿನ ಜಿನ್ನಾಪುರ ತಾಂಡಾದ ಹೊರವಲಯದಲ್ಲಿರುವ ಕೃಷಿ ಜಮೀನಿನಲ್ಲಿದ್ದ ಬಾವಿಯಲ್ಲಿ ಮುಳುಗಿ 11 ವರ್ಷದ ಸೌಂದರ್ಯ ರತ್ನಪ್ಪ ಪೂಜಾರ ಹಾಗೂ 10 ವರ್ಷದ ಲಕ್ಷ್ಮಿ ಶರಣಪ್ಪ ಪೂಜಾರ ಮೃತಪಟ್ಟಿದ್ದಾರೆ.

ಮೃತ ಬಾಲಕಿಯರ ಕುಟುಂಬ ತಾಂಡಾದ ಹೊರವಲಯದ ಹೊಲದಲ್ಲಿ ನೆಲೆಸಿದ್ದರು. ತಮ್ಮದೇ ತೋಟದ ಮನೆ ಬಳಿಯಿದ್ದ ಬಾವಿ ಬಳಿ ಆಡವಾಡಲು ಹೋಗಿದ್ದಾಗ ಇಬ್ಬರು ಬಾಲಕಿಯರು ಕಾಲು‌ ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾರೆ.

ಅಗ್ನಿಶಾಮಕ ದಳ ಹಾಗೂ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮೃತದೇಹ ತೆಗೆದಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!