ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

''ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ನಡೆದಿಲ್ಲ'': ಸ್ಪಷ್ಟನೆ ನೀಡಿದ ಡಿಸಿಎಂ DK Shivakumar

ಕೇರಳದ ದೇವಸ್ಥಾನದಲ್ಲಿ ಪ್ರಾಣಿ ಬಲಿ ಒಳಗೊಂಡ “ಶತ್ರು ಭೈರವಿ ಯಾಗ” ನಡೆಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಈ ಬಗ್ಗೆ ಮತ್ತೊಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಕೇರಳದ ದೇವಸ್ಥಾನದಲ್ಲಿ ಪ್ರಾಣಿ ಬಲಿ ಒಳಗೊಂಡ “ಶತ್ರು ಭೈರವಿ ಯಾಗ” ನಡೆಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಈ ಬಗ್ಗೆ ಮತ್ತೊಂದು ಸ್ಪಷ್ಟನೆ ನೀಡಿದ್ದಾರೆ.

ಹೌದು.. ಕೇರಳದ ರಾಜರಾಜೇಶ್ವರಿ ದೇಗುಲದಲ್ಲಿ “ಶತ್ರು ಭೈರವಿ ಯಾಗ” ನಡೀತಿದೆ. 21 ಮೇಕೆ, 3 ಎಮ್ಮೆ, 21 ಕುರಿಗಳು ಸೇರಿದಂತೆ ಪಂಚ ಬಲಿ ಕೊಡುತ್ತಿದ್ದಾರೆ. ಅವರ ಪ್ರಯತ್ನ ನಡೀತಾ ಇದೆ. ಅಘೋರಿಗಳ ಮೂಲಕ ಈ ಯಾಗ ಮಾಡಿಸುತ್ತಿದ್ದಾರೆ. ಯಾರು ಮಾಡುತ್ತಿದ್ದಾರೆ ಎಲ್ಲ ಗೊತ್ತಿದೆ. ಆದರೆ ನಾವು ನಂಬಿರುವ ದೇವರು ನಮ್ಮನ್ನು ಕಾಪಾಡುತ್ತಾನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಈ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ ಇದೀಗ ಈ ಬಗ್ಗೆ ಮತ್ತೊಂದು ಸ್ಪಷ್ಟನೆ ನೀಡಿದ್ದಾರೆ.

''ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ನಡೆದಿಲ್ಲ''

ಈ ಬಗ್ಗೆ ವಿಡಿಯೋ ಸಹಿತ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ''ನಾನು ದೇವಿ ರಾಜರಾಜೇಶ್ವರಿಯ ಭಕ್ತನಾಗಿದ್ದು, ಕೇರಳದ ಈ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎನ್ನುವ ಅರಿವಿದೆ. ನನ್ನ ಹೇಳಿಕೆಯನ್ನು ಕೆಲವರು ತಪ್ಪಾಗಿ ಗ್ರಹಿಸಿದ್ದು, ದೇವಸ್ಥಾನದಿಂದ 15 ಕಿ.ಮೀ. ದೂರದಲ್ಲಿರುವ ಖಾಸಗಿ ಸ್ಥಳದಲ್ಲಿ ಯಾಗ ನಡೆದಿದೆ ಎಂದು ಸ್ಪಷ್ಟಪಡಿಸುತ್ತೇನೆ.

ಯಾಗ ನಡೆದಿರುವ ಸ್ಥಳದ ಬಗ್ಗೆ ಮಾಹಿತಿ ನೀಡಲಷ್ಟೇ ನಾನು ದೇಗುಲದ ಹೆಸರನ್ನು ಉಲ್ಲೇಖಿಸಿದ್ದೆ. ಕೆಲವು ದಿನಗಳ ಹಿಂದೆ ತಾಯಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ‌ಭೇಟಿ‌ ನೀಡಿ ದೇವಿಯ ಆಶೀರ್ವಾದ ಪಡೆದಿದ್ದೆ. ವಿಷಯಗಳನ್ನು ಸಂದರ್ಭದಿಂದ ಹೊರಗಿಟ್ಟು ಅವುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂಬುದು ನನ್ನ ವಿನಂತಿ'' ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ