ಎಚ್. ಡಿ.ರೇವಣ್ಣ 
ರಾಜ್ಯ

ಅಪಹರಣ ಪ್ರಕರಣ: ಎಫ್‌ಐಆರ್ ರದ್ದು ಕೋರಿ ಎಚ್‌ಡಿ ರೇವಣ್ಣ ಅರ್ಜಿ; ವಿಚಾರಣೆ ಜೂನ್ 3ಕ್ಕೆ ಮುಂದೂಡಿಕೆ

ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಜೂನ್ 3ಕ್ಕೆ ಮುಂದೂಡಿದೆ.

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಜೂನ್ 3ಕ್ಕೆ ಮುಂದೂಡಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಎಚ್.ಡಿ.ರೇವಣ್ಣ ಹಾಗೂ ಇತರರ ವಿರುದ್ಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಏಪ್ರಿಲ್ 29 ರಂದು ಎಚ್.ಡಿ.ರೇವಣ್ಣ ಅವರನ್ನು ಎಸ್ ಐಟಿ ಬಂಧಿಸಿತ್ತು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಏತನ್ಮಧ್ಯೆ, ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಎಚ್ ಡಿ ರೇವಣ್ಣ ಅವರ ಪುತ್ರ, ಜೆಡಿಎಸ್‌ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶುಕ್ರವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಬಂಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT