ರಸ್ತೆಯಲ್ಲಿಯೇ ನಮಾಜ್ ಮಾಡಿದ ಅಪರಿಚಿತರ ಗುಂಪು 
ರಾಜ್ಯ

ಮಂಗಳೂರಿನ ರಸ್ತೆಯಲ್ಲೇ ನಮಾಜ್: ಬಿ-ರಿಪೋರ್ಟ್ ಸಲ್ಲಿಸಿದ ಪೊಲೀಸರು, ಇನ್ಸ್‌ಪೆಕ್ಟರ್ ಗೆ ಕಡ್ಡಾಯ ರಜೆ

ಮಂಗಳೂರು ನಗರದ ಕಂಕನಾಡಿಯ ಮಸೀದಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ನಗರ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ.

ಮಂಗಳೂರು: ನಗರದ ಕಂಕನಾಡಿಯ ಮಸೀದಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ನಗರ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ. ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಕದ್ರಿ ಪೊಲೀಸ್ ಇನ್ಸ್‌ಪೆಕ್ಟರ್ ಸೋಮಶೇಖರ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ.

ಪೊಲೀಸರ ಈ ಕ್ರಮಕ್ಕೆ ಹಲವಾರು ಕಡೆಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ನಂತರ ಇನ್ಸ್‌ಪೆಕ್ಟರ್ ಅನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಸಂಚಾರದ ಮೇಲೆ ಪರಿಣಾಮ ಬೀರುವ ಇತರ ಧಾರ್ಮಿಕ ಆಚರಣೆಗಳಿಗೆ ಪೊಲೀಸರು ಇದೇ ನಿಯಮವನ್ನು ಏಕೆ ಅನ್ವಯಿಸುವುದಿಲ್ಲ ಎಂದು ಹಲವರು ಪ್ರಶ್ನಿಸಿದ್ದರು.

ಈ ಕುರಿತು ಹೇಳಿಕೆ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಘಟನೆ ಕುರಿತು ಇನ್ಸ್‌ಪೆಕ್ಟರ್ ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ.

ಈಮಧ್ಯೆ, ರಸ್ತೆಗಳಲ್ಲಿ ಮತ್ತೆ ನಮಾಜ್ ಮಾಡಿದ ಪ್ರಕರಣಗಳು ವರದಿಯಾದರೆ ಬಜರಂಗದಳ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ವಿಎಚ್‌ಪಿ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಐಪಿಸಿ ಸೆಕ್ಷನ್ 154 ಎ ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದಕ್ಕೆ ಪಂಪ್‌ವೆಲ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!