ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಲಯಕ್ಕೆ ಹಾಜರಾದ ದೃಶ್ಯ. 
ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: Prajwal Revanna ಜೂನ್ 6ರವರೆಗೆ SIT ಕಸ್ಟಡಿಗೆ

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.

ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ದಳ (SIT) ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಕೋರ್ಟ್ ಮುಂದೆ ವಿಚಾರಣೆಗೆ ಹಾಜರುಪಡಿಸಿತು.

ಹೆಚ್ಚಿನ ವಿಚಾರಣೆಗೆ 15 ದಿನಗಳ ಕಾಲ ತನ್ನ ವಶಕ್ಕೆ ನೀಡುವಂತೆ ಎಸ್ ಐಟಿ ಕೇಳಿತ್ತು, ವಾದ-ವಿವಾದ ಆಲಿಸಿದ ನ್ಯಾಯಾಲಯ 1 ವಾರ ಕಸ್ಟಡಿಯಲ್ಲಿರಿಸಿಕೊಳ್ಳಲು ಅವಕಾಶ ನೀಡಿದೆ.

42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೆ.ಎನ್.ಶಿವಕುಮಾರ್ ಅವರು ರಿಮಾಂಡ್ ಅರ್ಜಿ ಮತ್ತು ಪ್ರಜ್ವಲ್ ಪರ ವಕೀಲರಿಂದ ಆಕ್ಷೇಪಣೆ ವಾದ ಆಲಿಸಿ, ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು.

ಎಸ್‌ಐಟಿ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ವಾದ ಮಂಡಿಸಿ 14 ದಿನಗಳ ಪೊಲೀಸ್ ಕಸ್ಟಡಿಗೆ ಕೋರಿದರು.

ಮೇ 5 ರವರೆಗೆ ತನ್ನ ಕಕ್ಷಿದಾರನ ವಿರುದ್ಧ ದಾಖಲಿಸಲಾದ ಆರಂಭಿಕ ಎಫ್‌ಐಆರ್‌ನಲ್ಲಿ ಯಾವುದೇ ಅತ್ಯಾಚಾರ ಆರೋಪಗಳಿಲ್ಲ ಮತ್ತು ಪೊಲೀಸ್ ಕಸ್ಟಡಿಗೆ ಶಿಫಾರಸು ಮಾಡಲಾಗಿಲ್ಲ ಎಂದು ಪ್ರಜ್ವಲ್ ಪರ ವಕೀಲ ಅರುಣ್ ಜಿ ಹೇಳಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನಾಯಕ್, ಪ್ರಜ್ವಲ್ ವಿರುದ್ಧ ಹಲವು ಸಾಕ್ಷ್ಯಾಧಾರಗಳಿವೆ ಮತ್ತು ಪೊಲೀಸ್ ಕಸ್ಟಡಿಗೆ ನೀಡುವಂತೆ ಒತ್ತಾಯಿಸಿದರು.

ಅರುಣ್ ಅವರು ತಮ್ಮ ಅಂತಿಮ ವಾದದಲ್ಲಿ, ವಿಚಾರಣೆಗೆ ಒಂದು ದಿನದ ಪೊಲೀಸ್ ಕಸ್ಟಡಿ ಸಾಕು ಎಂದು ಹೇಳಿದರು ಮತ್ತು ಒಂದು ದಿನಕ್ಕಿಂತ ಹೆಚ್ಚು ಕಾಲ ಅವರನ್ನು ರಿಮಾಂಡ್ ಮಾಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಧೀಶ ಶಿವಕುಮಾರ್ ಆದೇಶವನ್ನು ಕಾಯ್ದಿರಿಸಿದರು ಮತ್ತು ಒಂದು ಗಂಟೆಯ ವಿರಾಮದ ನಂತರ ಪ್ರಜ್ವಲ್ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು.

ಲೋಕಸಭೆ ಚುನಾವಣೆ ಮುಗಿಸಿ ಏಪ್ರಿಲ್ 27ರಂದು ಜರ್ಮನಿಗೆ ತೆರಳಿದ್ದ 33 ವರ್ಷದ ಪ್ರಜ್ವಲ್ ರೇವಣ್ಣ ಇಂದು ಬೆಳಗ್ಗೆಯಷ್ಟೇ ಮ್ಯೂನಿಚ್ ನಿಂದ ವಾಪಸ್ಸಾದ ಕೂಡಲೇ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಿ ವಿಚಾರಣೆಗಾಗಿ ಸಿಐಡಿ ಕಚೇರಿಗೆ ಕರೆದೊಯ್ಯಲಾಯಿತು.

ಸದ್ಯದಲ್ಲಿಯೇ ಪ್ರಜ್ವಲ್‌ಗೆ ಪುರುಷ ಸಾಮರ್ಥ್ಯ ಪರೀಕ್ಷೆ ನಡೆಸಲು ಎಸ್‌ಐಟಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT