ಭವಾನಿ ರೇವಣ್ಣ 
ರಾಜ್ಯ

ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಎಸ್‌ಐಟಿ ನೋಟಿಸ್; ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್ ನೀಡಿದೆ. ಜೂನ್ 1 ರಂದು ಹೊಳೆನರಸೀಪುರದ ಮನೆಯಲ್ಲಿ ತನಿಖೆ ಮತ್ತು ವಿಚಾರಣೆಗೆ ಹಾಜರಿರುವಂತೆ ಭವಾನಿ ಅವರಿಗೆ ತಿಳಿಸಿದೆ.

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್ ನೀಡಿದೆ. ಜೂನ್ 1 ರಂದು ಹೊಳೆನರಸೀಪುರದ ಮನೆಯಲ್ಲಿ ತನಿಖೆ ಮತ್ತು ವಿಚಾರಣೆಗೆ ಹಾಜರಿರುವಂತೆ ಭವಾನಿ ಅವರಿಗೆ ತಿಳಿಸಿದೆ.

‘ಮೊದಲು ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ತಾವು, ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ನಿವಾಸದಲ್ಲಿ ಇರುವುದಾಗಿ ತಿಳಿಸಿದ್ದೀರಿ. ಆದರೆ, ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ’ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಬರುತ್ತೇವೆ. ಆ ಸಂದರ್ಭದಲ್ಲಿ ನೀವು ಮನೆಯಲ್ಲಿ ಖುದ್ದು ಹಾಜರಿರಬೇಕು’ ಎಂದು ಎಸ್ಐಟಿ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ನೀಡಿರುವ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

ಹಾಸನ ಸಂಸದ, ಮತ್ತು ತಮ್ಮ ಮಗ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಎಚ್‌ಡಿ ರೇವಣ್ಣ ಅವರನ್ನು ಏಪ್ರಿಲ್ 29 ರಂದು ಬಂಧಿಸಲಾಗಿತ್ತು. ಬಳಿಕ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ರೇವಣ್ಣ ಮತ್ತು ಅವರ ಪುತ್ರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಮನೆ ಕೆಲಸದಾಕೆಯ ಮೇಲೆ ಲೈಂಗಿಕ ಕಿರುಕುಳ ಎಸಗಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಈಮಧ್ಯೆ, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು 24 ಗಂಟೆಗಳ ಒಳಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ. ಪ್ರಜ್ವಲ್ ರೇವಣ್ಣ ಅವರನ್ನು ಈಗಾಗಲೇ ಬಂಧಿಸಿರುವ ಹಿನ್ನೆಲೆಯಲ್ಲಿ ಅವರು ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅನೂರ್ಜಿತಗೊಳಿಸುವ ನಿರೀಕ್ಷೆಯಿದೆ.

ಮೈಸೂರಿನ ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್‌ಡಿ ರೇವಣ್ಣ ಜಾಮೀನು ಪ್ರಶ್ನಿಸಿ ಎಸ್ಐಟಿ ಕೂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಎಸ್‌ಐಟಿ ಪ್ರಕಾರ, ಈ ತನಿಖೆ ಮುಗಿಯುವವರೆಗೆ ರೇವಣ್ಣ ಕಸ್ಟಡಿಯಲ್ಲಿ ಮುಂದುವರಿಯಬೇಕು. ಹೀಗಾಗಿ ಜಾಮೀನು ರದ್ದುಗೊಳಿಸುವಂತೆ ಎಸ್‌ಐಟಿ ಹೈಕೋರ್ಟ್‌ಗೆ ಮನವಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT