ಪರಮೇಶ್ವರ್ ನಿವಾಸದ ಮುಂದೆ ಪ್ರತಿಭಟನೆ 
ರಾಜ್ಯ

ಗೃಹ ಸಚಿವ ಪರಮೇಶ್ವರ್ ನಿವಾಸದ ಮುಂದೆ ಹೈಡ್ರಾಮಾ: ಬಿಜೆಪಿ- ಜೆಡಿಎಸ್ ನಾಯಕರ ಪ್ರತಿಭಟನೆ, ಹಲವರ ಬಂಧನ

ಬಿಜೆಪಿ, ಜೆಡಿಎಸ್‌, ಬಿಎಸ್‌ಪಿ ಕಾರ್ಯಕರ್ತರನ್ನು ಒಳಗೊಂಡ ಪ್ರತಿಭಟನಾಕಾರರು ಪರಮೇಶ್ವರ ಅವರ ನಿವಾಸದ ಆವರಣಕ್ಕೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ತುಮಕೂರು: ತುಮಕೂರಿನ ಗೊಲ್ಲಹಳ್ಳಿ ಗ್ರಾಮದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ನಿವಾಸದಲ್ಲಿ ಗುರುವಾರ ಹೇಮಾವತಿ ನದಿ ನೀರನ್ನು ರಾಮನಗರ ಜಿಲ್ಲೆಗೆ ಬಿಡಲು ನಡೆಸುತ್ತಿರುವ 'ಎಕ್ಸ್‌ಪ್ರೆಸ್‌ ಕಾಲುವೆ’ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕರಾದ ಬಿ.ಸುರೇಶ್‌ಗೌಡ, ಎಂ.ಟಿ.ಕೃಷ್ಣಪ್ಪ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ ಬಳಿಕ ಹೈ ಡ್ರಾಮಾ ನಡೆಯಿತು.

ಬಿಜೆಪಿ, ಜೆಡಿಎಸ್‌, ಬಿಎಸ್‌ಪಿ ಕಾರ್ಯಕರ್ತರನ್ನು ಒಳಗೊಂಡ ಪ್ರತಿಭಟನಾಕಾರರು ಪರಮೇಶ್ವರ ಅವರ ನಿವಾಸದ ಆವರಣಕ್ಕೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಗಲಾಟೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೂಚಿಸಿದ್ದರು. ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆವಿ ಮಧ್ಯ ಪ್ರವೇಶಿಸಿದರು. ಡಿಸಿಸಿ ಅಧ್ಯಕ್ಷ ಚಂದ್ರಶೇಖರಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಯಿತು.

ಕಳೆದ ವಾರ ಗುಬ್ಬಿ ತಾಲೂಕಿನ ಯೋಜನಾ ಸ್ಥಳದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಹಾಸನದ ಗೊರೂರು ಜಲಾಶಯದಿಂದ ತುಮಕೂರಿನ ಹೇಮತಿ ನದಿ ನೀರನ್ನು ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಿಗೆ ಹರಿಸಲು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಹುಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದ್ದಾರೆ ಎಂದು ಆರೋಪಿಸಿದರು.

ಪೈಪುಗಳ ಬದಲು ನೈಸರ್ಗಿಕ ಕಣಿವೆಯ ಮೂಲಕ ನೀರು ಹರಿಸಬೇಕು ಎಂದು ಪ್ರತಿಭಟನಾಕಾರರು ಹೇಳಿದರು. ಇದೇ ವೇಳೆ ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಕುಡಿಯುವ ನೀರಿನ ಯೋಜನೆ ಪರವಾಗಿ ಪ್ರತಿಭಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT