ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ. 
ರಾಜ್ಯ

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಮೈಸೂರು ಜಿಲ್ಲಾಧಿಕಾರಿ ಕಚೇರಿಯಿದ್ದ ಕಟ್ಟಡವನ್ನು ನಾವು ಅಠಾರ ಎಂದು ಕರೆಯುತ್ತೇವೆ. ಅ ಕಟ್ಟಡದಲ್ಲಿ ಕನ್ನಡ ಸಂಗ್ರಹಾಲಯ’ವನ್ನು ಸರ್ಕಾರ ಸ್ಥಾಪಿಸಲಿದೆ.

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಉತ್ಪಾದನೆಯಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿಯೂ ಹೆಸರು ಬರೆಯುವುದನ್ನು ಕಡ್ಡಾಯ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಣೆ ಮಾಡಿದರು.

ವಿಧಾನಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮತ್ತು ಸುವರ್ಣ ಸಂಭ್ರಮ ಪ್ರಶಸ್ತಿಗಳನ್ನು ಸಾಧಕರಿಗೆ ಪ್ರದಾನ ಮಾಡಿ ಮುಖ್ಯಮಂತ್ರಿಗಳು ಮಾತನಾಡಿದರು.

ಬಳಿಕ ಮಾತನಾಡಿದ ಸಿಎಂ, ಮೈಸೂರು ಜಿಲ್ಲಾಧಿಕಾರಿ ಕಚೇರಿಯಿದ್ದ ಕಟ್ಟಡವನ್ನು ನಾವು ಅಠಾರ ಎಂದು ಕರೆಯುತ್ತೇವೆ. ಅ ಕಟ್ಟಡದಲ್ಲಿ ಕನ್ನಡ ಸಂಗ್ರಹಾಲಯ’ವನ್ನು ಸರ್ಕಾರ ಸ್ಥಾಪಿಸಲಿದೆ ಎಂದು ಘೋಷಿಸಿದರು.

ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಾಣವಾಗಬೇಕು. ಬೇರೆ ಯಾವ ರಾಜ್ಯದಿಂದ ಜನರ ಬಂದರೂ ಅವರಿಗೆ ಕನ್ನಡ ಕಲಿಸಬೇಕು. ಅವರು ಕನ್ನಡದಲ್ಲೇ ಮಾತನಾಡಿ ವ್ಯವಹಾರ ಮಾಡುವಂತೆ ಮಾಡಬೇಕು. ಸರ್ಕಾರ ಇಂತಹ ಕೆಲಸ ಮಾಡಲಿದ್ದು, ನಾಗರಿಕರೂ ಎಲ್ಲರಿಗೂ ಕನ್ನಡ ಕಲಿಸುತ್ತೇವೆ ಎಂದು ಪ್ರಮಾಣ ಮಾಡಬೇಕು. ಕರ್ನಾಟಕ ಎಂದು ಮರುನಾಮಕರಣವಾಗಿ 51 ವರ್ಷ ತುಂಬಿದೆ. 50 ವರ್ಷ ಆದಾಗಲೇ ಸಮಾರಂಭ ಮಾಡಬೇಕಿತ್ತು. ಬಿಜೆಪಿ ಸರ್ಕಾರ ಮಾಡಲಿಲ್ಲ. ಆದ್ದರಿಂದ, ನಾವು ಬಜೆಟ್‌ನಲ್ಲಿ ಘೋಷಿಸಿ ವರ್ಷಪೂರ್ತಿ ಸುವರ್ಣ ಮಹೋತ್ಸವ ಆಚರಿಸಿದ್ದೇವೆ.

ರಾಜ್ಯೋತ್ಸವ, ಸುವರ್ಣ ಪ್ರಶಸ್ತಿ ಸಂದಿರುವುದು ನಿಮ್ಮ ಸಾಧನೆಗಳಿಂದ. ನಾಡು, ಜಲ, ನೆಲ, ಸಂಸ್ಕೃತಿ ನಾಡಿಗೆ ನೀವು ನೀಡಿರುವ ಕೊಡುಗೆಗಳನ್ನು ಗುರುತಿಸಿ ನೀಡಲಾಗಿದೆ. ನಿಮಗೆ ಪ್ರಶಸ್ತಿ ಪ್ರದಾನ ಮಾಡುವುದರೊಂದಿಗೆ ಸರ್ಕಾರ ತನ್ನನ್ನು ತಾನೂ ಗೌರವಿಸಿಕೊಂಡಿದೆ. ನೀವು ಇನ್ನೂ ಹೆಚ್ಚಿನ ಸಾಧನೆ ಮಾಡಿ, ಎಲ್ಲರಿಗೂ ಮಾದರಿ ಆಗಿ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರಾದ 69 ಸಾಧಕರು ಮತ್ತು ಕರ್ನಾಟಕ ಸುವರ್ಣ ಸಂಭ್ರಮದ ಪ್ರಶಸ್ತಿಗೆ ಭಾಜನರಾದ 100 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ 2023-24ನೇ ಸಾಲಿನ ವಾರ್ಷಿಕ ಪ್ರಗತಿ ವರದಿ ಸಂಸ್ಕೃತಿ ಪಯಣ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು. ಅಂತೆಯೇ ವರ್ಷವಿಡೀ ಕನ್ನಡ ರಥ ನಾಡಿನೆಲ್ಲೆಡೆ ಸಂಚರಿಸಿದ್ದು ರಥ ವಿನ್ಯಾಸ ಮಾಡಿದ ಸನತ್ ಕುಮಾರ್ ಹಾಗೂ ಚಾಲಕ ಮಂಜುನಾಥ್ ಅವರಿಗೆ ವಿಶೇಷವಾಗಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಗೃಹ ಸಚಿವರಾದ ಪರಮೇಶ್ವರ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT