ಡಾ. ಸಿ.ಎನ್.ಅಶ್ವತ್ಥ ನಾರಾಯಣ 
ರಾಜ್ಯ

ವಕ್ಫ್ ಮಂಡಳಿಯಿಂದ ಅಕ್ರಮದ ಆರೋಪ: ಇಡಿ, ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

1974ರ ವಕ್ಫ್ ಆಸ್ತಿ ಗೆಜೆಟ್ ನೋಟಿಫಿಕೇಶನ್ ಹಿಂಪಡೆಯಲು ಹಾಗೂ ಅಧಿಕಾರ ದುರುಪಯೋಗ ಆರೋಪದ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ನವೆಂಬರ್ 4ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ವಕ್ಫ್ ಮಂಡಳಿಯ ಅಕ್ರಮಗಳ ಬಗ್ಗೆ ಜಾರಿ ನಿರ್ದೇಶನಾಲಯ (ED) ಮತ್ತು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.

ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ, 1974ರ ವಕ್ಫ್ ಆಸ್ತಿ ಗೆಜೆಟ್ ನೋಟಿಫಿಕೇಶನ್ ಹಿಂಪಡೆಯಲು ಹಾಗೂ ಅಧಿಕಾರ ದುರುಪಯೋಗ ಆರೋಪದ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ನವೆಂಬರ್ 4ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು.

ಹಣದ ಲಾಭಕ್ಕಾಗಿ ಕರ್ನಾಟಕ ವಕ್ಫ್ ಮಂಡಳಿಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿರುವ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ ಡಾ. ಅಶ್ವತ್ಥ ನಾರಾಯಣ, ಕಳೆದ 50 ವರ್ಷಗಳಿಂದ ಸೃಷ್ಟಿಸಿದ ದಾಖಲೆಗಳು ಈಗ ಅಲ್ಪಸಂಖ್ಯಾತರ ಓಲೈಕೆ ಹಾಗೂ ಮತ ಬ್ಯಾಂಕ್ ರಾಜಕಾರಣಕ್ಕೆ ಬಳಕೆಯಾಗುತ್ತಿವೆ. ಈ ಕಾಯ್ದೆಯಡಿ ರಚಿಸಲಾದ ಎಲ್ಲಾ ದಾಖಲೆಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ ಎಂದರು.

ಅಲ್ಪಸಂಖ್ಯಾತರ ಓಲೈಕೆಗಾಗಿ ಮೂಲತಃ ಕಾಂಗ್ರೆಸ್ ಜಾರಿಗೊಳಿಸಿದ ವಕ್ಫ್ ಕಾಯ್ದೆಯ ದುರುಪಯೋಗದ ಬಗ್ಗೆ "ರೈತರು, ಮಠಗಳು ಮತ್ತು ಹಿಂದೂ ದೇವಾಲಯಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇದರಿಂದ ರೈತರು ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಕೇವಲ ನೋಟೀಸ್ ಹಿಂಪಡೆಯುವುದು ಸಾಕಾಗುವುದಿಲ್ಲ. ರೈತರ ಹೆಸರನ್ನು ಆಸ್ತಿ ದಾಖಲೆಗಳಿಗೆ ಮರುಸ್ಥಾಪಿಸಬೇಕು ಮತ್ತು 1974 ರ ಗೆಜೆಟ್ ಅಧಿಸೂಚನೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್