ಸಿದ್ದರಾಮಯ್ಯ 
ರಾಜ್ಯ

ವಕ್ಫ್ ವಿವಾದ: ರೈತರಿಗೆ ನೀಡಿದ ನೋಟಿಸ್ ವಾಪಸ್ ಪಡೆದು, ಪಹಣಿ ತಿದ್ದುಪಡಿ ರದ್ದು ಮಾಡಿ- ಸಿಎಂ ಖಡಕ್ ಸೂಚನೆ!

ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದರು. ಈ ವೇಳೆ ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು: ವಕ್ಫ್‌ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ.

ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದರು. ಈ ವೇಳೆ ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದು ಈ ರೀತಿಯ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಕ್ಫ್‌ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಸಿದ್ದರಾಮಯ್ಯ ವಿನಂತಿ ಮಾಡಿದ್ದು ಅವರ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಜನತೆಗೆ ಮನವಿ ಮಾಡಿದರು.

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆರಿಯಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಖಡಕ್ ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT