ಪಟಾಕಿ ಸಿಡಿಸುವ ವೇಳೆ ಯುವಕ ಸಾವು 
ರಾಜ್ಯ

ಪಟಾಕಿ ಸಿಡಿಸುವಾಗ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ, 6 ಮಂದಿ ಬಂಧನ; Video Viral

ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಾಕಷ್ಟು ಪ್ರಕರಣಗಳಲ್ಲಿ ಹಲವರಿಗೆ ಕುತ್ತಾಗಿದ್ದು, ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಸಾಕಷ್ಟು ಮಂದಿ ಮುಂಜಾಗ್ರತೆ ಇಲ್ಲದೇ ಪಟಾಕಿ ಸಿಡಿಸುವಲ್ಲಿ ತೊಡಗುತ್ತಾರೆ. ಇದರಿಂದ ಅವರಿಗೆ ಮಾತ್ರವಲ್ಲ ಇತರರಿಗೂ ತೊಂದರೆಯಾಗುತ್ತದೆ. ಸಾಕಷ್ಟು ಪ್ರಕರಣಗಳಲ್ಲಿ ಇಂತಹ ಕೃತ್ಯಗಳಿಂದ ತಮ್ಮದಲ್ಲದ ತಪ್ಪಿದೆ ಸಾಕಷ್ಟು ಮಂದಿ ತೊಂದರೆಗೆ ಸಿಲುಕಿ ಕಣ್ಣುಕಳೆದುಕೊಂಡಿದ್ದಾರೆ. ಆದರೆ ಇಂತಹುದೇ ಕಿಡಿಗೇಡಿ ಕೃತ್ಯದಿಂದ ಇಲ್ಲೋರ್ವ ಯುವಕ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ.

ಹೌದು.. ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೂಲಗಳ ಪ್ರಕಾರ ಅಕ್ಟೋಬರ್ 31ರಂದು ಕೋಣನಕುಂಟೆ ಠಾಣೆ ವ್ಯಾಪ್ತಿಯ ವೀವರ್ಸ್ ಕಾಲೋನಿಯಲ್ಲಿ ಪಟಾಕಿ ಸ್ಫೋಟದಿಂದ ತೀವ್ರವಾಗಿ ಗಾಯಗೊಂಡಿದ್ದ ಶಬರೀಶ್ ಎಂಬ ಯುವಕ ಸಾವನ್ನಪ್ಪಿದ್ದಾನೆ.

ಅಕ್ಟೋಬರ್ 31ರಂದು ರಾತ್ರಿ ಪಾನಮತ್ತರಾಗಿ ಪಟಾಕಿ ಸಿಡಿಸುತ್ತಿದ್ದ ಯುವಕರು, ಪಟಾಕಿ ಹಚ್ಚುವಾಗ ಅದರ ಮೇಲೆ ಡಬ್ಬ ಇರಿಸಿ, ಆ ಡಬ್ಬದ ಮೇಲೆ ಕುಳಿತುಕೊಳ್ಳುವಂತೆ ಶಬರೀಶನಿಗೆ ಸವಾಲೆಸೆದಿದ್ದರು. ಮದ್ಯದ ಅಮಲಿನಲ್ಲಿದ್ದ ಶಬರೀಶ್, ತಾನು ಪಟಾಕಿ ಸಿಡಿಯುವವರೆಗೂ ಡಬ್ಬದ ಮೇಲೆ ಕುಳಿತುಕೊಂಡರೆ, ತನಗೆ ಆಟೋ ರಿಕ್ಷಾ ಕೊಡಿಸಬೇಕು ಎಂದಿದ್ದ. ಅದಕ್ಕೆ ಸ್ನೇಹಿತರು ಒಪ್ಪಿಕೊಂಡಾಗ ಸವಾಲನ್ನು ಸ್ವೀಕರಿಸಿ ಪಟಾಕಿ ಇದ್ದ ಡಬ್ಬದ ಮೇಲೆ ಕುಳಿತಿದ್ದಾನೆ.

ಅದರಂತೆ ಭಾರೀ ಪಟಾಕಿಯನ್ನು ಇರಿಸಿ ಅದಕ್ಕೆ ಬೆಂಕಿ ಹಚ್ಚಿದ್ದ ಆತನ ಸ್ನೇಹಿತರು, ಡಬ್ಬದ ಮೇಲೆ ಶಬರೀಶನನ್ನು ಕೂರಿಸಿ ಅಲ್ಲಿಂದ ದೂರ ಓಡಿದ್ದಾರೆ. ಬಳಿಕ ಪಟಾಕಿ ಸಿಡಿದ ರಭಸಕ್ಕೆ ಶಬರೀಶನ ಖಾಸಗಿ ಅಂಗಕ್ಕೆ ತೀವ್ರವಾಗಿ ಸುಟ್ಟ ಗಾಯವಾಗಿತ್ತು. ತಕ್ಷಣ ಶಬರೀಶನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು‌ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 2ರಂದು ಆತ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಠಾಣೆ ಪೊಲೀಸರು, ಆರೋಪಿಗಳಾದ ನವೀನ್, ದಿನಕರ್, ಸತ್ಯವೇಲು, ಕಾರ್ತಿಕ್, ಸತೀಶ್, ಸಂತೋಷ್ ಎಂಬುವರನ್ನು ಬಂಧಿಸಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ ಜಗಲಾಸರ್ ಮಾಹಿತಿ ನೀಡಿದ್ದಾರೆ.

ಸ್ನೇಹಿತರ ಕಿಡಿಗೇಡಿ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸ್ನೇಹಿತರು ಪಟಾಕಿ ಸಿಡಿಸುವ ಕಿಡಿಗೇಡಿ ಕೃತ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT