ಸಾಂದರ್ಭಿಕ ಚಿತ್ರ 
ರಾಜ್ಯ

HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ರಾಜ್ಯ ಸರ್ಕಾರ ಇಂದು ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದ್ದು, ಈ ತಿಂಗಳು ಕೊನೆಯವರೆಗೆ ಅಂದರೆ ನವೆಂಬರ್ 30ರವರೆಗೆ ಎಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರು: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೋಮವಾರ ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದೆ.

ಬರೋಬ್ಬರಿ ನಾಲ್ಕು ಬಾರಿ ಗಡವು ವಿಸ್ತರಿಸಿದರೂ ಬಹುತೇಕ ವಾಹನ ಮಾಲೀಕರು ಇನ್ನೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಇಂದು ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದ್ದು, ಈ ತಿಂಗಳು ಕೊನೆಯವರೆಗೆ ಅಂದರೆ ನವೆಂಬರ್ 30ರವರೆಗೆ ಎಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ಆದೇಶ ಹೊರಡಿಸಿದೆ.

ಒಂದು ವೇಳೆ ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದಿದ್ದರೆ ಡಿಸೆಂಬರ್ 1ರಿಂದ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.

ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಗೊಳಿಸಲಾಗಿದೆ.

ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ