ಹೆಚ್ ಕೆ ಪಾಟೀಲ್ 
ರಾಜ್ಯ

ಬೆಳಗಾವಿ ಜಂಟಿ ಅಧಿವೇಶನ: ಅಮೆರಿಕಾ ಮಾಜಿ ಅಧ್ಯಕ್ಷ ಒಬಾಮಾಗೆ ಸರ್ಕಾರ ಆಹ್ವಾನ- HK ಪಾಟೀಲ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನನ್ನು ಶತಮಾನೋತ್ಸವ ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಈ ಸಮಿತಿ ನ.5 ರಂದು ಬೆಳಗಾವಿಗೆ ಭೇಟಿ ನೀಡಲಿದೆ.

ಗದಗ: ಬೆಳಗಾವಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎಐಸಿಸಿ ಸಭೆಗೆ 100 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವಿಶೇಷ ಜಂಟಿ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದ್ದು, ಜಂಟಿ ಅಧಿವೇಶನಕ್ಕೆ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್​ ಒಬಾಮ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಕಾನೂನು ಸಚಿವ ಹಾಗೂ ಶತಮಾನೋತ್ಸವ ಸಮಿತಿ ಅಧ್ಯಕ್ಷ ಹೆಚ್‌.ಕೆ. ಪಾಟೀಲ್ ಅವರು ಸೋಮವಾರ ಹೇಳಿದರು.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನನ್ನು ಶತಮಾನೋತ್ಸವ ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಈ ಸಮಿತಿ ನ.5 ರಂದು ಬೆಳಗಾವಿಗೆ ಭೇಟಿ ನೀಡಲಿದೆ. 2025ರ ಅಕ್ಟೋಬರ್ 2 ರವರೆಗೆ ಶತಮಾನೋತ್ಸವ ಮಾಡಲಾಗುತ್ತದೆ ಎಂದು ಹೇಳಿದರು.

ಸಮಿತಿಯು ವಿಶೇಷ ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲಿ ಆಯೋಜಿಸಲು ನಿರ್ಧರಿಸಿದ್ದು, ಕಾರ್ಯಕ್ರಮಕ್ಕೆ ಗಾಂಧೀಜಿಯವರ ಅನುಯಾಯಿ ಆಗಿರುವ ಮತ್ತು ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಅಹ್ವಾನಿಸಲಾಗಿದೆ. ಒಬಾಮಾ ಅವರು ನೀಡುವ ದಿನಾಂಕ ನೋಡಿಕೊಂಡು ಜಂಟಿ ಅಧಿವೇಶನ ದಿನಾಂಕವನ್ನು ನಿರ್ಧರಿಸಲಾಗುವುದು.

ಗಾಂಧೀಜಿ ಅವರು ಕೇವಲ ಭಾರತದ ನಾಯಕನಲ್ಲ. ವಿಶ್ವ ನಾಯಕ ಎಂದು ಸಾರುವ ಗಾಂಧಿ ಅನುಯಾಯಿ, ಅಭಿಮಾನಿಗೆ ಆಹ್ವಾನ ನೀಡಿದ್ದೇವೆ. ಇದೊಂದು ಉತ್ತಮವಾದ ಕಾರ್ಯಕ್ರಮ ಆಗಲಿದೆ ಎಂದು ತಿಳಿಸಿದರು.

ಗಾಂಧೀಜಿ ಅವರು ರಾಜ್ಯದ 120 ಸ್ಥಳಗಳಿಗೆ ಭೇಟಿ ನೀಡಿದ್ದು, ಅವರು ಭೇಟಿ ನೀಡಿದ ರಾಜ್ಯದ 40 ಸ್ಥಳಗಳಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು. ಬೇರೆ ಬೇರೆ ಜಿಲ್ಲೆಗಳು ರಥಯಾತ್ರೆಯ ಜ್ಯೋತಿಗಳು ಡಿಸೆಂಬರ್ 26 ಮತ್ತು 27ಕ್ಕೆ ಬೆಳಗಾವಿಗೆ ತಲುಪಲಿವೆ. ಬಳಿಕ ಯುವ, ಮಹಿಳಾ, ಸಾಮರಸ್ಯ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT