ಮೃತ ಸಂಧ್ಯಾ 
ರಾಜ್ಯ

Drink And Drive: ಬೆಂಗಳೂರಿನಲ್ಲಿ ಮಹಿಳೆ ಬಲಿ; ಕೇಸ್ ವಾಪಸ್ ಗೆ ಕೋಟಿ ಕೋಟಿ ಆಫರ್!.. Benz ಕಾರು ಮಾಲೀಕ ಯಾರು?

ಭಾನುವಾರ ಸಂಜೆ 6.45ಕ್ಕೆ ಆರೋಪಿ ಧನುಷ್ ಹಾಗೂ ಗೆಳೆಯರು ಭರ್ಜರಿ ಪಾರ್ಟಿ ಮುಗಿಸಿ ರೋಡ್‌ನಲ್ಲಿ ವೇಗದಲ್ಲಿ ಡ್ರೈವಿಂಗ್ ಮಾಡುತ್ತಿದ್ದರು. ಕೆಂಗೇರಿ ಬಸ್ ನಿಲ್ದಾಣದ ಬಳಿ ಟೆಕ್ಕಿ ಸಂಧ್ಯಾ ಅವರು ರಸ್ತೆ ಕ್ರಾಸ್ ಮಾಡುತ್ತಿದ್ದರು.

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಿಂಕ್ ಅಂಡ್ ಡ್ರೈವ್ ಗೆ ಮತ್ತೊಂದು ಬಲಿಯಾಗಿದ್ದು, 30 ವರ್ಷದ ಸಂಧ್ಯಾ ಎಂಬ ಮಹಿಳೆ ದುರಂತ ಸಾವಿಗೀಡಾಗಿದ್ದಾರೆ.

ಕೆಂಗೇರಿ ಬಸ್ ನಿಲ್ದಾಣದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಡೀ ಸಿಲಿಕಾನ್ ಸಿಟಿ ಜನರನ್ನೇ ಬೆಚ್ಚಿ ಬೀಳಿಸಿದೆ. ಸಣ್ಣದೊಂದು ತಪ್ಪು ಮಾಡದ ಟೆಕ್ಕಿ ಸಂಧ್ಯಾ ಅವರ ಮೇಲೆ ಕುಡಿದು ಬೆನ್ಜ್‌ ಕಾರು ಓಡಿಸುತ್ತಿದ್ದವರು ಅಟ್ಟಹಾಸ ಮೆರೆದಿದ್ದು, ಕಾರು ಗುದ್ದಿದ ರಭಸಕ್ಕೆ ಸಂಧ್ಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾರ ಭಾನುವಾರ ಸಂಜೆ 6.45ಕ್ಕೆ ಆರೋಪಿ ಧನುಷ್ ಹಾಗೂ ಗೆಳೆಯರು ಭರ್ಜರಿ ಪಾರ್ಟಿ ಮುಗಿಸಿ ರೋಡ್‌ನಲ್ಲಿ ವೇಗದಲ್ಲಿ ಡ್ರೈವಿಂಗ್ ಮಾಡುತ್ತಿದ್ದರು. ಕೆಂಗೇರಿ ಬಸ್ ನಿಲ್ದಾಣದ ಬಳಿ ಟೆಕ್ಕಿ ಸಂಧ್ಯಾ ಅವರು ರಸ್ತೆ ಕ್ರಾಸ್ ಮಾಡುತ್ತಿದ್ದರು. ಸ್ಪೀಡಾಗಿ ಬರ್ತಿದ್ದ ಕಾರು ಟೆಕ್ಕಿ ಸಂಧ್ಯಾಗೆ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಮೇಲೆ ಹಾರಿದ ಸಂಧ್ಯಾ ಅವರ ದೇಹವೇ ನುಜ್ಜುಗುಜ್ಜಾಗಿದೆ.

ಸಂಧ್ಯಾ ಅವರು ತಮ್ಮ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವೇಳೆ ಕೆಂಗೇರಿ ಬಸ್ ನಿಲ್ದಾಣ ಬಳಿ ಈ ಅಪಘಾತ ನಡೆದಿದೆ. ಅಪಘಾತದ ಬಳಿಕ ಸಂಧ್ಯಾ ಅವರಿಗೆ ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಸಂಧ್ಯಾ ಸ್ನೇಹಿತರು, ಸ್ಥಳೀಯರು ಬಿಜಿಎಸ್ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಂಧ್ಯಾ ಒಬ್ಬರಿಗೇ ಅಲ್ಲ ಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೂ ಬೆನ್ಜ್‌ ಕಾರು ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದ ಸೈಯ್ಯದ್ ಎಂಬ ವ್ಯಕ್ತಿಗೂ ಗಾಯಗಳಾಗಿದ್ದು, ಕುಡಿದ ಮತ್ತಲ್ಲಿ ಅತಿವೇಗವಾಗಿ ಚಾಲನೆ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ.

ಆರೋಪಿಗಳು ಅಂದರ್!

ಅಪಘಾತದ ನಂತರ ಆರೋಪಿ ಧನುಷ್ ಹಾಗೂ ಸ್ನೇಹಿತರು ಸ್ಥಳದಿಂದ ಓಡಿಹೋಗಲು ಯತ್ನಿಸಿದ್ದಾರೆ. ಪರಾರಿಯಾಗುತ್ತಿದ್ದ ಆರೋಪಿಗಳನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. BNS 105 ಅಡಿಯಲ್ಲಿ ಆರೋಪಿ ಧನುಷ್ ವಿರುದ್ಧ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಅಪಘಾತಕ್ಕೆ ಕಾರಣವಾದ ಬೆನ್ಜ್ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಮದ್ಯಪಾನ ಪರೀಕ್ಷೆ

ಕಾರಿನಲ್ಲಿ ತೆರಳುತ್ತಿದ್ದ ವೇಳೆ ಆರೋಪಿ ಧನುಷ್ ಹಾಗೂ ಸ್ನೇಹಿತರು ಕುಡಿದ ಅಮಲಿನಲ್ಲಿದ್ದರು. ಆರೋಪಿ ಚಾಲಕನನ್ನು ಪೊಲೀಸರು ಮದ್ಯಪಾನ ಪರೀಕ್ಷೆಗೊಳಪಡಿಸಿದ್ದು ಈ ವೇಳೆ ಆರೋಪಿ ಚಾಲಕನ ಆಲ್ಕೋಮೀಟರ್ ಪರೀಕ್ಷೆಯು 177 mg / 100 ml ರಕ್ತದ ಆಲ್ಕೋಹಾಲ್ ಅಂಶವನ್ನು ಹೊಂದಿತ್ತು ಎಂದು ತೋರಿಸಿದೆ. ಇದು ಕಾನೂನುಬದ್ಧವಾಗಿ ಅನುಮತಿಸುವ 30 mg / 100 ml ಗಿಂತ ಹೆಚ್ಚಿನದಾಗಿದೆ" ಎಂದು ತಿಳಿದುಬಂದಿದೆ.

ಕೇಸ್ ವಾಪಸ್ ಪಡೆಯಲು ಕೋಟಿ ಕೋಟಿ ಆಫರ್

ಸಂಧ್ಯಾ ಅವರ ದುರಂತ ಸಾವಿಗೆ ಸಂಬಂಧಿಸಿದಂತೆ ಅವರ ಸಹೋದರ ಪೊಲೀಸ್ ದೂರು ದಾಖಲಿಸಿದ್ದಾರೆ. ಇದೀಗ ಕೇಸ್ ವಾಪಸ್ ಪಡೆಯುವಂತೆ ಆರೋಪಿ ಧನುಷ್ ಸಂಬಂಧಿಕರು ಕೋಟಿ ಕೋಟಿ ಆಫರ್ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಂದಹಾಗೆ ಕಾರು ಚಲಾಯಿಸುತ್ತಿದ್ದ ಆರೋಪಿ ಧನುಷ್ ಕೋಟ್ಯಾಧಿಪತಿ ಪರಮಶಿವಯ್ಯ ಎಂಬುವವರ ಒಬ್ಬನೇ ಪುತ್ರ.

ಸಂಧ್ಯಾಗೆ ಗುದ್ದಿರುವ ಬೆಂಜ್ ಕಾರು LV ಟ್ರಾವೆಲ್ಸ್‌ಗೆ ಸೇರಿದ್ದು ಎನ್ನಲಾಗಿದೆ. ಟ್ರಾವೆಲ್ಸ್ ಮಾಲೀಕರಾಗಿರುವ ಪರಮಶಿವಯ್ಯ ಒಬ್ಬನೇ ಮಗನಿಗೆ ಐಷಾರಾಮಿ ಬೆಂಜ್ ಕಾರನ್ನು ಕೊಡಿಸಿದ್ದರು.

ಇದೀಗ ಕಾರು ಮಾಲೀಕರ ಕಡೆಯವರು ಬಂದು ಎಫ್ಐಆರ್ ಮಾಡಬೇಡಿ. ದುಡ್ಡು ಕೊಡ್ತೀವಿ ಅಂತಾ ಹೇಳಿದ್ದರು. ನಮಗೆ ದುಡ್ಡು ಬೇಡ, ಸಂಧ್ಯಾ ಬೇಕು. ಈ ಘಟನೆ ಬಗ್ಗೆ ಎಲ್ಲಾ ತಿಳಿದುಕೊಂಡು ಪೊಲೀಸ್​ ಠಾಣೆಗೆ ಹೋಗಿ ಎಫ್​ಐಆರ್​ ಹಾಕಲು ಮುಂದಾಗಿದ್ದೆವು. ಆದರೆ ಅಲ್ಲಿ ಎಫ್​ಐಆರ್​ ಹಾಕೋದಕ್ಕೆ ಹಿಂದೇಟು ಹಾಕಿದ್ದು, ಬಳಿಕ ಎಫ್​ಐಆರ್​ ದಾಖಲು ಮಾಡಿಕೊಂಡ್ರು ಅಂತ ಸಂಧ್ಯಾ ಸಹೋದರ ಹೇಳಿದ್ದಾರೆ. ಅಲ್ಲದೆ ಆತ ಶೋಕಿಯಲ್ಲಿ ಕುಡಿದು ಕಾರು ಓಡಿಸಿ ನಮ್ಮ ಅಕ್ಕನ ಜೀವ ತೆಗೆದಿದ್ದಾನೆ. ಅವರಿಗೆ ಶಿಕ್ಷೆ ಆಗಲೇಬೇಕು ಅಂತ ಕಣ್ಣೀರು ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT