ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ 
ರಾಜ್ಯ

IPS ಅಧಿಕಾರಿಗೆ ಬೆದರಿಕೆ: ಎಚ್‌ಡಿ ಕುಮಾರಸ್ವಾಮಿ, ನಿಖಿಲ್ ವಿರುದ್ಧ FIR; ದೂರು ಹಾಸ್ಯಾಸ್ಪದ ಎಂದ ಕೇಂದ್ರ ಸಚಿವ

ಎಡಿಜಿಪಿ ಚಂದ್ರಶೇಖರ್​ (ADGP Chandrashekar) ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲಾಗಿದೆ.

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಯೊಬ್ಬರಿಗೆ ಬೆದರಿಕೆ ಮತ್ತು ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಅವರ ಸಹಾಯಕ ಸುರೇಶ್ ಬಾಬು ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಎಡಿಜಿಪಿ ಚಂದ್ರಶೇಖರ್​ (ADGP Chandrashekar) ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲಾಗಿದೆ.

ಬಿಎನ್​ಎಸ್​ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ಆರೋಪಿ ನಂಬರ್​ 1 ಆಗಿದ್ದಾರೆ. ಅಂತೆಯೇ ಜೆಡಿಎಸ್​ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ (Nikhil Kumaraswamy) ಆರೋಪಿ ನಂಬರ್​ 2 ಮತ್ತು ಜೆಡಿಎಸ್​ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್​ 3 ಆಗಿದ್ದಾರೆ ಎಂದು ತಿಳಿದುಬಂದಿದೆ.

ದೂರಿನಲ್ಲಿರುವಂತೆ ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದು, ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್​ಐಆರ್​ ದಾಖಲಾಗಿದೆ.

ದುರುದ್ದೇಶಪೂರಿತ, ಹಾಸ್ಯಾಸ್ಪದ: ಎಚ್ ಡಿಕೆ ತಿರುಗೇಟು

ಇನ್ನು ಎಫ್ಐಆರ್ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, 'ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಮ್ಮನ್ನು ಗುರಿಯಾಗಿಸಿಕೊಂಡಿದೆ. ನಾನು ಎಫ್‌ಐಆರ್ ಮತ್ತು ದೂರಿನ ವಿಷಯವನ್ನು ಓದಿದ್ದೇನೆ. ಇದು ಸಂಪೂರ್ಣವಾಗಿ ಹಾಸ್ಯಾಸ್ಪದ ಮತ್ತು ಸ್ಪಷ್ಟವಾಗಿ ದುರುದ್ದೇಶಪೂರಿತವಾಗಿದೆ. ನಾನು ಪತ್ರಿಕಾಗೋಷ್ಠಿಯಲ್ಲಿ ಅವರ ವಿರುದ್ಧ ಆರೋಪ ಮಾಡಿದ್ದೇನೆ ಎಂದು ದೂರುದಾರರು ಹೇಳಿಕೆ ನೀಡಿದ್ದು, ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ನಾನು ಅವರ ಬಗ್ಗೆ ತಪ್ಪು ಮಾಹಿತಿ ನೀಡಿದ್ದೇನೆಯೇ? ಅವರು ಬೇಕಿದ್ದರೆ ನನ್ನ ಪತ್ರಿಕಾಗೋಷ್ಠಿಯ ವಿಡಿಯೋವನ್ನು ಪರಿಶೀಲಿಸಬಹುದು ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಗಣಿ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಸಂಘರ್ಷ ನಡೆಸುತ್ತಿರುವ ಕೇಂದ್ರ ಸಚಿವ ಕುಮಾರಸ್ವಾಮಿ!

ಇನ್ನು ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್​ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್​ಐಟಿ ಎಡಿಜಿಪಿ ಚಂದ್ರಶೇಖರ್​ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದಕ್ಕೆ, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ, ಹೇಗಾದರೂ ಮಾಡಿ ಒಮ್ಮೆಯಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಸಂಚು ಹೂಡಿದ್ದಾರೆ.

ಅಧಿಕಾರಿ ಯಾವ ಹಿನ್ನೆಲೆಯಿಂದ ಬಂದವರು? ಅಕ್ರಮ ಹಣ ಸಂಪಾದನೆ ಮಾಡುವವರಿಗೆ ರಕ್ಷಣೆ ಕೊಡಿ ಎಂದು ನಿಮ್ಮನ್ನು ಐಪಿಎಸ್ ಆಫೀಸರ್ ಮಾಡಿದ್ದಾರಾ? ನಾನು ಬೇಲ್ ತಗೊಂಡೆ, ತನಿಖೆಗೆ ಮಾಡಬೇಡಿ ಎಂದು ಹೇಳಿಲ್ಲ. ನೀವು ಏನ್ ಮಾಡಿದ್ದೀರಿ? ನಿಮ್ಮ ವಿರುದ್ಧವೇ ಕೇಸ್ ಇದೆ, ಆರೋಪಿ ನಂಬರ್ 2. ಹೈಕೋರ್ಟ್​​​ನಲ್ಲಿ ಅಧಿಕಾರಿ ತಡೆಯಾಜ್ಞೆ ತೆಗೆದುಕೊಂಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದರು.

ಈ ಬಳಿಕ ಎಡಿಜಿಪಿ ಚಂದ್ರಶೇಖರ್​​ ತಮ್ಮ ಸಿಬ್ಬಂದಿಗೆ ಪತ್ರ ಬರೆದು, ಹೆಚ್​ ಡಿ ಕುಮಾರಸ್ವಾಮಿ ಅವರು ನನ್ನ ಮೇಲೆ ಸಾಕಷ್ಟು ಸುಳ್ಳು ಆರೋಪ ಮಾಡಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮತ್ತು ಭಯ ಹುಟ್ಟಿಸುವ ಉದ್ದೇಶ ಹೊಂದಿದ್ದಾರೆ. ಅವರು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಅವರೊಬ್ಬ ಆರೋಪಿ. ಇಂತಹ ಆರೋಪ ಮತ್ತು ಬೆದರಿಕೆಗಳಿಗೆ ನಾವು ನಿರಾಶೆಗೊಳ್ಳಬಾರದರು ಎಂದು ಪತ್ರದಲ್ಲಿ ಬರೆದಿದ್ದರು.

ಅಂತೆಯೇ ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ. ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೀವಿ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ ಎಂದು ಪತ್ರದಲ್ಲಿ ಜಾರ್ಜ್​​ ಬರ್ನಾಡ್​​ ಶಾ ಅವರ ಹೇಳಿಕೆ ಉಲ್ಲೇಖಿಸಿದ್ದರು. ಈ ಬಳಿಕ ಎಡಿಜಿಪಿ ಚಂದ್ರಶೇಖರ್​ ಅವರು ಸಂಜಯನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದು ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೆ ಜೆಡಿಎಸ್ ಕಾರ್ಯಕರ್ತರು ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ಪ್ರತಿಭಟನೆ ಕೂಡ ನಡೆಸಿದ್ದರು.

ಅಂದಹಾಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ (ಎಸ್‌ಎಸ್‌ವಿಎಂ) ಅಕ್ರಮವಾಗಿ ಗಣಿಗಾರಿಕೆ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರಾಗಿರುವ ಎಡಿಜಿಪಿ ಎಂ.ಚಂದ್ರಶೇಖರ್ ಅವರು ತನಿಖೆ ನಡೆಸುತ್ತಿದ್ದಾರೆ. ದೂರಿನ ಪ್ರಕಾರ, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಖ್ಯೆ 16/2014 ಗೆ ಸಂಬಂಧಿಸಿದ ಹೆಚ್ಚುವರಿ ಸಾಕ್ಷ್ಯಗಳು ಹೊರಬಂದಿವೆ ಎಂದು ಚಂದ್ರಶೇಖರ್ ರಾಜ್ಯಪಾಲರಿಗೆ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT