ಸಿಎಂ ಸಿದ್ದರಾಮಯ್ಯ 
ರಾಜ್ಯ

ನಾಳೆ ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ: ಸಿಎಂ ಸಿದ್ದರಾಮಯ್ಯ

ನಾನು ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹೋಗುತ್ತಿದ್ದೇನೆ ಎಂದು ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ನಾನು ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹೋಗುತ್ತಿದ್ದೇನೆ ಎಂದು ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಂಯ್ಯನ ಅವರಿಗೆ ಲೋಕಾಯುಕ್ತ ಪೊಲೀಸರು ಸೋಮವಾರ ನೋಟಿಸ್ ಜಾರಿ ಮಾಡಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಪ್ರಕರಣವೊಂದರ ಆರೋಪಿಯಾಗಿ ವಿಚಾರಣೆ ಎದುರಿಸಬೇಕಾಗಿ ಬಂದಿದೆ.

ಪ್ರಕರಣ ಸಂಬಂಧ ಈಗಾಗಲೇ ಲೋಕಾಯುಕ್ತ ಎಲ್ಲಾ ಆರೋಪಿಗಳ ವಿಚಾರಣೆ ಮುಗಿಸಿದ್ದು, ಸಿದ್ದರಾಮಯ್ಯನವರ ವಿಚಾರಣೆಯೊಂದೇ ಬಾಕಿ ಇತ್ತು. ಇದೀಗ ಎ1 ಆರೋಪಿಗೂ ಸಹ ಲೋಕಾಯುಕ್ತ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಸಿದ್ದರಾಮಯ್ಯ ಅವರ ನಾಳಿನ ಪ್ರವಾಸ ಪಟ್ಟಿ ಹೀಗಿದೆ

ಸಿಎಂ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ 7.30ಕ್ಕೆ ಬೆಂಗಳೂರಿಂದ‌ ರಸ್ತೆ ಮೂಲಕ ಮೈಸೂರಿಗೆ ಪ್ರಯಾಣ ಬೆಳಸಲಿದ್ದು, ಮಧ್ಯಾಹ್ನ 12 ಗಂಟೆವರೆಗೆ ಸಮಯ ಮೀಸಲಿರಿಸಿದ್ದಾರೆ. 12 ಗಂಟೆ ನಂತರ ಮೈಸೂರಿನಿಂದ ರಸ್ತೆ ಮೂಲಕ ಚನ್ನಪಟ್ಟಣಕ್ಕೆ ಪ್ರಯಾಣ ಬೆಳಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಚನ್ನಪಟ್ಟಣದ ಬೇವೂರು ಗ್ರಾಮಕ್ಕೆ ತೆರಳಲಿದ್ದಾರೆ. ಅಲ್ಲಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಹಳ್ಳಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್​ ಪರವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ. ರಾತ್ರಿ 9 ಗಂಟೆಯವರೆಗೂ ಚನ್ನಪಟ್ಟಣದಲ್ಲೇ ಇರಲಿರುವ ಸಿಎಂ ಸಿದ್ದರಾಮಯ್ಯ, 9 ಗಂಟೆಗೆ ಚನ್ನಪಟ್ಟಣದಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel