ತೇಜಸ್ವಿ ಸೂರ್ಯ - ಡಿ ಕೆ ಶಿವಕುಮಾರ್ 
ರಾಜ್ಯ

ಬೆಂಗಳೂರು: ನಾಳೆಯಿಂದ ನಾಗಸಂದ್ರ-ಮಾದಾವರ ಮೆಟ್ರೋ ಸೇವೆ ಆರಂಭ

ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮೆಟ್ರೋ ಮಾರ್ಗವನ್ನು ಪರಿಶೀಲಿಸಿದರು ಮತ್ತು ಯಶವಂತಪುರ ಮೆಟ್ರೋ ನಿಲ್ದಾಣದಿಂದ ಮಾದಾವರದವರೆಗೆ ಪ್ರಯಾಣಿಸುವ ಮೂಲಕ ನಾಗಸಂದ್ರ - ಮಾದಾವರದವರೆಗಿನ ವಿಸ್ತರಿತ ಮಾರ್ಗಕ್ಕೆ ಪ್ರಾಯೋಗಿಕ ಚಾಲನೆ ನೀಡಿದರು.

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋದ ಗ್ರೀನ್ ಲೈನ್ ನ ನಾಗಸಂದ್ರದಿಂದ ಮಾದಾವರ ವರೆಗಿನ 3.14-ಕಿಮೀ. ವಿಸ್ತರಿತ ಮಾರ್ಗದಲ್ಲಿ ನವೆಂಬರ್ 7 ರಂದು ವಾಣಿಜ್ಯ ಕಾರ್ಯಾಚರಣೆಗೆ ಆರಂಭಿಸಲಾಗುವುದು ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮೆಟ್ರೋ ಮಾರ್ಗವನ್ನು ಪರಿಶೀಲಿಸಿದರು ಮತ್ತು ಯಶವಂತಪುರ ಮೆಟ್ರೋ ನಿಲ್ದಾಣದಿಂದ ಮಾದಾವರದವರೆಗೆ ಪ್ರಯಾಣಿಸುವ ಮೂಲಕ ನಾಗಸಂದ್ರ - ಮಾದಾವರದವರೆಗಿನ ವಿಸ್ತರಿತ ಮಾರ್ಗಕ್ಕೆ ಪ್ರಾಯೋಗಿಕ ಚಾಲನೆ ನೀಡಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಾಥ್ ನೀಡಿದರು.

ಸದ್ಯ ನಾಗಸಂದ್ರ ನಿಲ್ದಾಣದವರೆಗೂ ಹಸಿರು ಮಾರ್ಗ ಇದ್ದು, ನಾಗಸಂದ್ರದಿಂದ‌ ಮಾದಾವರವರೆಗೂ ಮೆಟ್ರೋ ಮಾರ್ಗ ವಿಸ್ತರಣೆ ಮಾಡಲಾಗಿದೆ.

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್​ ಅವರು, ನಾಗಸಂದ್ರದಿಂದ ಮಾದಾವರ ಮೆಟ್ರೋ ನಿಲ್ದಾಣದವರೆಗಿನ ವಿಸ್ತರಿತ 3.14 ಕಿಮೀ ಮಾರ್ಗವನ್ನು ಇಂದು ಪರಿಶೀಲನೆ ನಡೆಸಿದೆ. ನಾಗರಿಕರನ್ನು ಹೆಚ್ಚು ಕಾಯಿಸುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಈಗಲೇ ಹೊಸ ಮಾರ್ಗದ ಸೇವೆಯನ್ನು ಆರಂಭಿಸಲಾಗಿದ್ದು, ಸದ್ಯದಲ್ಲೇ ಅಧಿಕೃತವಾಗಿ ಉದ್ಘಾಟಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel