ಅಮಿತ್ ಕುಮಾರ್ 
ರಾಜ್ಯ

ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಮುಳುಗಿ ಬೆಂಗಳೂರಿನ ಟೆಕ್ಕಿ ಸಾವು

ಜಲಪಾತದಲ್ಲಿನ ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಇಬ್ಬರೂ ಈಜಲು ಹೋದಾಗ ಈ ದುರಂತ ಸಂಭವಿಸಿದೆ. ಆಳವಾದ ನೀರಿನಲ್ಲಿ ಅಮಿತ್ ಸಿಕ್ಕಿಬಿದ್ದು ನೀರಿನಲ್ಲಿ ಮುಳುಗಿದ್ದಾರೆ

ಬೆಂಗಳೂರು: ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಟೆಕ್ಕಿಯೊಬ್ಬರು ಕೆಮ್ಮಣ್ಣುಗುಂಡಿ ಬಳಿಯ ಹೆಬ್ಬೆ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಛತ್ತೀಸಗಡ ಮೂಲದ ಅಮಿತ್ ಕುಮಾರ್ (30) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿರುವ ತಮಿಳುನಾಡಿನ ಗೆಳೆಯ ಸಲಾಮ್ ಖಾನ್ ಜೊತೆಗೆ ಹೋಗಿದ್ದರು.

ರಜೆ ಇದ್ದ ಕಾರಣ ಇವರಿಬ್ಬರು ಪ್ರವಾಸ ಕೈಗೊಂಡಿದ್ದರು. 120 ಅಡಿ ಇಳಿಜಾರಿನಲ್ಲಿ ನೀರು ಹರಿಯುವ ಹೆಬ್ಬೆ ಜಲಪಾತ ಸೇರಿದಂತೆ ಜಿಲ್ಲೆಯ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದರು. ಜಲಪಾತದಲ್ಲಿನ ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಇಬ್ಬರೂ ಈಜಲು ಹೋದಾಗ ಈ ದುರಂತ ಸಂಭವಿಸಿದೆ. ಆಳವಾದ ನೀರಿನಲ್ಲಿ ಅಮಿತ್ ಸಿಕ್ಕಿಬಿದ್ದು ನೀರಿನಲ್ಲಿ ಮುಳುಗಿದ್ದಾರೆ, ಅರಣ್ಯ ಸಿಬ್ಬಂದಿ ಮತ್ತು ಸ್ಥಳೀಯರು ಸಲಾಂ ಖಾನ್ ನನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT