ಕೆಎಸ್ ಆರ್ ಟಿಸಿ (ಸಾಂದರ್ಭಿಕ ಚಿತ್ರ) 
ರಾಜ್ಯ

KSRTC: ದೀಪಾವಳಿ ರಜೆ, ಟಿಕೆಟ್‌ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 5.59 ಕೋಟಿ ರೂ ಆದಾಯ!

ಅಧಿಕಾರಿಗಳ ಮಾಹಿತಿ ಪ್ರಕಾರ ಬೆಂಗಳೂರು ನಗರದಿಂದ ದಾವಣಗೆರೆ, ಮೈಸೂರು, ಹುಬ್ಬಳ್ಳಿ, ತಿರುಪತಿ, ಶಿವಮೊಗ್ಗ ಮತ್ತು ಕಲಬುರಗಿಗೆ ಹೆಚ್ಚಿನ ಟಿಕೆಟ್‌ಗಳು ಬುಕ್ ಆಗಿವೆ.

ಬೆಂಗಳೂರು: ದೀಪಾವಳಿ ಹಬ್ಬ ಮತ್ತು ಸಾಲು ಸಾಲು ರಜೆಯ ಹಿನ್ನಲೆಯಲ್ಲಿ ಸರ್ಕಾರಿ ಬಸ್‌ಗಳಲ್ಲಿ ಸಂಚಾರ ನಡೆಸಿದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆನ್‌ಲೈನ್‌ ಟಿಕೆಟ್ ಬುಕ್ಕಿಂಗ್ ಮತ್ತು ಆದಾಯದಲ್ಲಿ ಕೆಎಸ್ಆರ್‌ಟಿಸಿ ಹೊಸ ದಾಖಲೆ ಮಾಡಿದೆ.

ಒಂದೇ ದಿನ 85,462 ಟಿಕೆಟ್‌ಗಳು ಬುಕ್ಕಿಂಗ್ ಆಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನಿಂದ ವಿವಿಧ ನಗರಗಳಿಗೆ ಹೋಗುವ ಮತ್ತು ವಾಪಸ್ ಆಗುವ ಹೆಚ್ಚು ಟಿಕೆಟ್‌ಗಳು ಬುಕ್ ಆಗಿದ್ದು, ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ ಬೆಂಗಳೂರು ನಗರದಿಂದ ದಾವಣಗೆರೆ, ಮೈಸೂರು, ಹುಬ್ಬಳ್ಳಿ, ತಿರುಪತಿ, ಶಿವಮೊಗ್ಗ ಮತ್ತು ಕಲಬುರಗಿಗೆ ಹೆಚ್ಚಿನ ಟಿಕೆಟ್‌ಗಳು ಬುಕ್ ಆಗಿವೆ. ಭಾನುವಾರ 85,462 ಸೀಟುಗಳು ಬುಕ್ ಆಗಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5.59 ಕೋಟಿ ರೂ. ಆದಾಯವನ್ನು ಕೆಎಸ್‌ಆರ್‌ಟಿಸಿ ಗಳಿಸಿದೆ. 2006ರಲ್ಲಿ ಕೆಎಸ್ಆರ್‌ಟಿಸಿ ಅವತಾರ್ ಮೊಬೈಲ್ ಅಪ್ಲಿಕೇಶನ್ ಆರಂಭ ಮಾಡಿತ್ತು. ಅಂದಿನಿಂದ ಇಂದಿನವರೆಗೆ ಈ ಪ್ರಮಾಣದಲ್ಲಿ ಟಿಕೆಟ್ ಬುಕ್ಕಿಂಗ್ ಆಗಿರಲಿಲ್ಲ. ಈಗ ಈ ಅಪ್ಲಿಕೇಶನ್ ಮೂಲಕ ದಾಖಲೆಯ ಟಿಕೆಟ್‌ಗಳು ಬುಕ್ ಆಗಿವೆ. ಇದಕ್ಕೂ ಮೊದಲು ಅಕ್ಟೋಬರ್ ತಿಂಗಳ ದಿನವೊಂದರಲ್ಲಿ 67,033 ಟಿಕೆಟ್ ಮಾರಾಟವಾಗಿದ್ದವು. 4.63 ಕೋಟಿ ಆದಾಯ ಗಳಿಸಿತ್ತು.

18 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅವತಾರ್ ಅಪ್ಲಿಕೇಷನ್ ನಲ್ಲಿ ಈ ರೀತಿಯ ದಾಖಲೆ ಪ್ರಮಾಣದಲ್ಲಿ ಟಿಕೆಟ್ ಬುಕ್ಕಿಂಗ್ ಆಗಿದೆ.ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ನಗರಕ್ಕೆ ಸಂಚಾರ ನಡೆಸುವ ಜನರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಕೆಎಸ್ಆರ್‌ಟಿಸಿ ಓಡಿಸಿದೆ. ಅಕ್ಟೋಬರ್ 30ರಂದು 480 ಹೆಚ್ಚುವರಿ ಬಸ್‌ಗಳು ಸಂಚಾರ ನಡೆಸಿವೆ. ನವೆಂಬರ್ 3ರಂದು 643 ಹೆಚ್ಚುವರಿ ಬಸ್‌ಗಳು ಸಂಚರಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!