ಸಂಗ್ರಹ ಚಿತ್ರ 
ರಾಜ್ಯ

ನಿಯಮಗಳ ಗಾಳಿಗೆ ತೂರಿ MUDA ಸಿಬ್ಬಂದಿಯಿಂದ ಕೋಟ್ಯಾಂತರ ರೂಪಾಯಿ ವಂಚನೆ: RTI ಕಾರ್ಯಕರ್ತ ಗಂಗರಾಜು ಆರೋಪ

ಮುಡಾದಲ್ಲಿರುವ ಸಿಬ್ಬಂದಿಗಳು ನಕಲಿ ದಾಖಲೆ ಸೃಷ್ಟಿಸಿ, ದಾಖಲೆಗಳನ್ನು ತಿರುಚಿ ಸುಳ್ಳು ಬ್ಯಾಂಕ್ ಚಲನ್‌ಗಳನ್ನು ನೀಡಿ ಗ್ರಾಹಕರ ಹಣವನ್ನು ಕಬಳಿಸಿ ಪ್ರಾಧಿಕಾರಕ್ಕೆ ಭಾರಿ ನಷ್ಟ ಉಂಟು ಮಾಡಿದ್ದಾರೆ.

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ)ನ 50:50 ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಪ್ರಗತಿಯಲ್ಲಿರುವಂತೆಯೇ ಪ್ರಾಧಿಕಾರದಲ್ಲಿ ನಡೆಯುತ್ತಿರು ಮತ್ತೊಂದು ಹಗರಣವನ್ನು ಆರ್‌ಟಿಐ ಕಾರ್ಯಕರ್ತರೊಬ್ಬರು ಬಯಲಿಗೆಳೆದಿದ್ದಾರೆ.

ಮುಡಾದಲ್ಲಿರುವ ಸಿಬ್ಬಂದಿಗಳು ನಕಲಿ ದಾಖಲೆ ಸೃಷ್ಟಿಸಿ, ದಾಖಲೆಗಳನ್ನು ತಿರುಚಿ ಸುಳ್ಳು ಬ್ಯಾಂಕ್ ಚಲನ್‌ಗಳನ್ನು ನೀಡಿ ಗ್ರಾಹಕರ ಹಣವನ್ನು ಕಬಳಿಸಿ ಪ್ರಾಧಿಕಾರಕ್ಕೆ ಭಾರಿ ನಷ್ಟ ಉಂಟು ಮಾಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದಾರೆ.

ಈ ಸಂಬಂಧ ಮುಡಾ ಆಯುಕ್ತರಿಗೆ ದೂರು ಸಲ್ಲಿಸಿರುವ ಗಂಗರಾಜು ಅವರು, ಮುಡಾ ಆವರಣದಲ್ಲಿರುವ ಬ್ಯಾಂಕ್‌ನ ಅಧಿಕಾರಿಗಳ ಸಹಯೋಗದಲ್ಲಿ ಕೆಲವು ಮುಡಾ ನೌಕರರು ಮತ್ತು ಹೊರಗುತ್ತಿಗೆ ಸಿಬ್ಬಂದಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಕಲಿ ಚಲನ್‌ಗಳನ್ನು ನೀಡುತ್ತಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷವೇ ಹಗರಣದ ಮೇಲೆ ಬೆಳಕು ಚೆಲ್ಲಲಾಗಿತ್ತು. ಆದರೆ, ಈ ವರೆಗೂ ಯಾವುದೇ ಕ್ರಮವಾಗಿಲ್ಲ. ಹೀಗಾಗಿ ಹಗರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಉಳಿಸಿ ವೇದಿಕೆ’ ಸದಸ್ಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ದೂರು ಕುರಿತು ಪ್ರತಿಕ್ರಿಯೆ ನೀಡಿರುವ ಮುಡಾ ಅಧಿಕಾರಿಗಳು ಈ ಬಗ್ಗೆ ಕಳೆದ ವರ್ಷ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ